ಮೈಸೂರು:ಖಾಸಗಿ ಕಾರ್ಯಕ್ರಮದ ನಿಮಿತ್ತ ಇಂದು ಮೈಸೂರಿಗೆ ಆಗಮಿಸಿದ ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮುಂದಿನ ಚುನಾವಣೆಯಲ್ಲಿ ತಾವು ಒಂದೇ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಸ್ಪಷ್ಟಪಡಿಸಿದರು.
ರಾಜ್ಯದ ಹಲವು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವಂತೆ ಒತ್ತಾಯ ಬಂದಿದೆ. ಆದರೆ ನಾನು ಕೋಲಾರ, ಬಾದಾಮಿ, ವರುಣ ಕ್ಷೇತ್ರಗಳನ್ನು ಶಾರ್ಟ್ ಲಿಸ್ಟ್ ಮಾಡಿದ್ದೇನೆ. ಅದರಲ್ಲಿ ಒಂದು ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವೆ. ಎಲ್ಲಿ ಸ್ಪರ್ಧೆ ಮಾಡುತ್ತೇನೆ ಎಂಬುದನ್ನು ಚುನಾವಣೆ ಘೋಷಣೆಯ ನಂತರ ಹೈಕಮಾಂಡ್ ತೀರ್ಮಾನ ಮಾಡಿದ ನಂತರ ನಿರ್ಧರಿಸುತ್ತೇನೆ ಎಂದರು.