ಮೈಸೂರು:ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಬಳಿಕ ತಮ್ಮ ಸ್ವಕ್ಷೇತ್ರವಾದ ವರುಣಾಗೆ ಜೂನ್ 10ರಂದು (ನಾಳೆ) ಆಗಮಿಸುತ್ತಿದ್ದಾರೆ. ಈ ವೇಳೆ ತಮ್ಮ ಕ್ಷೇತ್ರದ ಮತದಾರರ ಕೃತಜ್ಞತಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. 2023ರ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ರೋಚಕವಾಗಿ ಗೆದ್ದ ಸಿದ್ದರಾಮಯ್ಯ ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿ ಆಗಿದ್ದಾರೆ. ಸಿಎಂ ಆದ ನಂತರ ಇದೇ ಮೊದಲ ಬಾರಿಗೆ ತಮ್ಮ ತವರು ಜಿಲ್ಲೆ ಮೈಸೂರಿಗೆ ಆಗಮಿಸುತ್ತಿದ್ದಾರೆ. ನಾಳೆ ನೇರವಾಗಿ ಮುಖ್ಯಮಂತ್ರಿ ಅವರು ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ನಲ್ಲಿ ಸುತ್ತೂರಿನ ಹೆಲಿಪ್ಯಾಡ್ಗೆ ಆಗಮಿಸಲಿದ್ದಾರೆ.
ಕೃತಜ್ಞತಾ ಸಮಾವೇಶದಲ್ಲಿ ಭಾಗಿ ಸಿಎಂ:ಸಿದ್ದರಾಮಯ್ಯ ವರುಣಾ ಕ್ಷೇತ್ರದ ಬಿಳಿಗೆರೆಯಲ್ಲಿ ನಡೆಯಲಿರುವ ಕೃತಜ್ಞತಾ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಸಿದ್ದರಾಮಯ್ಯರನ್ನು ತಮ್ಮ ಕೊನೆಯ ಚುನಾವಣೆಯಲ್ಲಿ ಗೆಲ್ಲಿಸಿದ ಕ್ಷೇತ್ರದ ಜನರಿಗೆ ಧನ್ಯವಾದ ಅರ್ಪಿಸಲಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಸಿದ್ದರಾಮಯ್ಯ ಮತ್ತು ಪ್ರತಿಸ್ಪರ್ಧಿ ಬಿಜೆಪಿಯ ವಿ.ಸೋಮಣ್ಣ ನಡುವೆ ಪ್ರಬಲ ಪೈಪೋಟಿ ಏರ್ಪಟ್ಟಿತ್ತಾದರೂ ಕೊನೆಯಲ್ಲಿ ಸಿದ್ದರಾಮಯ್ಯ 46,006 ಮತಗಳ ಭಾರಿ ಅಂತರದಿಂದ ಗೆದ್ದಿದ್ದರು.
ಜೊತೆಗೆ ವರುಣಾ ಕ್ಷೇತ್ರ ಸಿದ್ದರಾಮಯ್ಯ ಅವರ ಲಕ್ಕಿ ಕ್ಷೇತ್ರವೂ ಆಗಿದ್ದು, ಅದರಂತೆ ಈ ಬಾರಿಯ ಪ್ರಬಲ ಗೆಲುವಿನ ನಂತರ ರಾಜ್ಯದ ಮುಖ್ಯಮಂತ್ರಿ ಸಹ ಆದರು. ಆದ್ದರಿಂದ ತಮ್ಮನ್ನು ಬಹುಮತದಿಂದ ಮತ್ತು ಭಾರಿ ಮತಗಳ ಅಂತರದಿಂದ ಗೆಲ್ಲಿಸಿ ಕ್ಷೇತ್ರದ ಜನತೆಗೆ ಸಿದ್ದರಾಮಯ್ಯ ಈ ಕೃತಘ್ನತಾ ಸಮಾವೇಶದಲ್ಲಿ ಧನ್ಯವಾದ ಅರ್ಪಿಸಲಿದ್ದಾರೆ.
ಇದನ್ನೂ ಓದಿ:Congress Guarantees: ಗ್ಯಾರಂಟಿ ಯೋಜನೆಗಳ ಷರತ್ತಿನಲ್ಲಿ ಗೊಂದಲ; ಸದನದಲ್ಲಿ ಹೋರಾಟಕ್ಕೆ ಅಣಿಯಾದ ಬಿಜೆಪಿ