ಕರ್ನಾಟಕ

karnataka

ETV Bharat / state

ನಂಜನಗೂಡಿನಲ್ಲಿ ದೇವಸ್ಥಾನ ನೆಲಸಮ... ಬಿಜೆಪಿಗೆ ಹಿಂದುತ್ವ ರಕ್ಷಣೆಯ ನೆ‌ನಪಾಗಲಿಲ್ಲವೇ?: ಸಿದ್ದರಾಮಯ್ಯ ಕಿಡಿ - ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್​

ದೇವಸ್ಥಾನ ಕೆಡವಿ ಹಾಕಿದ ಘಟನೆ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ನಿಷ್ಪಕ್ಷಪಾತ ತನಿಖೆ‌ ನಡೆಸಿ‌ ಕಾರಣಕರ್ತ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ..

ಸಿದ್ದರಾಮಯ್ಯ ಕಿಡಿ
ಸಿದ್ದರಾಮಯ್ಯ ಕಿಡಿ

By

Published : Sep 11, 2021, 6:27 PM IST

Updated : Sep 11, 2021, 6:38 PM IST

ಮೈಸೂರು :ನಂಜನಗೂಡಿನಲ್ಲಿ ದೇವಸ್ಥಾನ ನೆಲಸಮ ಮಾಡಿರುವುದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಹಿಂದೂ ಧರ್ಮದ ರಕ್ಷಣೆಯನ್ನು ಗುತ್ತಿಗೆ ಪಡೆದವರ ರೀತಿ ಮಾತನಾಡುವ ಬಿಜೆಪಿಯವರಿಗೆ ಇಂತಹ ದುಸ್ಸಾಹಸ ಮಾಡುವ ಮೊದಲು ಹಿಂದುತ್ವ ರಕ್ಷಣೆಯ ನೆ‌ನಪಾಗಲಿಲ್ಲವೇ? ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಂಜನಗೂಡಿನಲ್ಲಿ ಪುರಾತನ ದೇವಸ್ಥಾನವನ್ನು ಕೆಡವಿ ಹಾಕಿರುವುದು ಖಂಡನೀಯ ಕೃತ್ಯ. ಇದೊಂದು ಧರ್ಮಸೂಕ್ಷ್ಮ ವಿಚಾರವಾಗಿದ್ದು, ಇಂತಹ ನಿರ್ಧಾರ ಕೈಗೊಳ್ಳುವ ಮೊದಲು ಬಿಜೆಪಿಯವರು, ಸ್ಥಳೀಯರ ಜೊತೆ ಮಾತುಕತೆ ನಡೆಸಬೇಕಾಗಿತ್ತು.

ನ್ಯಾಯಾಲಯದ ಆದೇಶವಿದ್ದರೂ ಅದ‌ನ್ನು ತರಾತುರಿಯಲ್ಲಿ ಅನುಷ್ಠಾನಗೊಳಿಸುವ ಮುನ್ನ ಜಿಲ್ಲಾಡಳಿತ ಪರಿಣಾಮದ ಬಗ್ಗೆ ಯೋಚನೆ ಮಾಡಬೇಕಾಗಿತ್ತು. ಹೊಸ ನಿವೇಶನ ಮಂಜೂರು ಮಾಡಿ ಸರ್ವರನ್ನೂ ವಿಶ್ವಾಸಕ್ಕೆ ಪಡೆದು ನೂತನ ದೇವಸ್ಥಾನವನ್ನು ರಾಜ್ಯ ಸರ್ಕಾರವೇ ನಿರ್ಮಿಸಿ ಕೊಡಬೇಕು.

ದೇವಸ್ಥಾನ ಕೆಡವಿ ಹಾಕಿದ ಘಟನೆ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ನಿಷ್ಪಕ್ಷಪಾತ ತನಿಖೆ‌ ನಡೆಸಿ‌ ಕಾರಣಕರ್ತ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಏನಿದೆ ಘಟನೆ?:ನಂಜನಗೂಡು ತಾಲೂಕಿನ ಹುಲ್ಲಹಳ್ಳಿ-ಹೊಮ್ಮರಗಳ್ಳಿ ರಸ್ತೆಯಲ್ಲಿರುವ ಹುಚ್ಚಗಣಿ ಗ್ರಾಮದಲ್ಲಿ ಮಹದೇವಮ್ಮ ದೇವಸ್ಥಾನವನ್ನ ಎರಡು ದಿನಗಳ ಹಿಂದೆ ತೆರವುಗೊಳಿಸಲಾಗಿತ್ತು.

30 ವರ್ಷಗಳಿಂದ ಇದ್ದ ಮಹದೇವಮ್ಮ ದೇವಸ್ಥಾನದಿಂದ ಯಾವುದೇ ರೀತಿ ತೊಂದರೆಯಾಗಿರಲಿಲ್ಲ. ಸರ್ಕಾರಿ ಜಾಗದಲ್ಲಿ ದೇವಸ್ಥಾನ ಇದೆ ಹಾಗೂ ರಸ್ತೆ ಬದಿಯಲ್ಲಿ ದೇವಸ್ಥಾನ ತೆರವುಗೊಳಿಸಬೇಕು ಎಂಬ ಸೂಚನೆ ಹಿನ್ನೆಲೆ ತೆರವುಗೊಳಿಸಿರುವುದರಿಂದ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದರು.

Last Updated : Sep 11, 2021, 6:38 PM IST

ABOUT THE AUTHOR

...view details