ಮೈಸೂರು: ಆರ್ಎಸ್ಎಸ್ನವರ ಪಾಪದ ಕೂಸು ಬಿಜೆಪಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಇಂದು ತಮ್ಮ ಮೈಸೂರಿನ ನಿವಾಸದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪಿಎಫ್ಐ ಕಾಂಗ್ರೆಸ್ನ ಪಾಪದ ಕೂಸು ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದರು.
ಬಿ ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಏನು ಮಾಡುತ್ತಿದ್ದರು ಎಂದು ಪ್ರಶ್ನಿಸಿದ ಅವರು, ಆರ್ಎಸ್ಎಸ್ನವರ ಪಾಪದ ಕೂಸು ಬಿಜೆಪಿ ಎಂದು ತಿರುಗೇಟು ನೀಡಿದರು.
ಭಾರತ್ ಜೋಡೋ ಯಾತ್ರೆ ನಾಳೆ ಕರ್ನಾಟಕ ಪ್ರವೇಶಿಸಲಿದ್ದು, ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಗೆ ನಾಳೆ ಯಾತ್ರೆ ಬರಲಿದ್ದು, ಅಗತ್ಯ ಸಿದ್ಧತೆಗಳು ನಡೆದಿವೆ. ರಾಹುಲ್ ಗಾಂಧಿಯನ್ನು ಸ್ವಾಗತಿಸಿ ನಂತರ ಬೆಳಗ್ಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ನಂತರ ಪಾದಯಾತ್ರೆ ಆರಂಭವಾಗಲಿದೆ. ಪಾದಯಾತ್ರೆಯಲ್ಲಿ ಸುಮಾರು 40 ರಿಂದ 45 ಸಾವಿರ ಜನ ಸೇರಲಿದ್ದು, ಪಾದಯಾತ್ರೆ ಬೇಗೂರಿನಲ್ಲಿ ಕೊನೆಗೊಳ್ಳಲಿದೆ. ಅಕ್ಟೋಬರ್ 2 ರಂದು ರಾತ್ರಿ ಮೈಸೂರಿನ ವಸ್ತು ಪ್ರದರ್ಶನ ಆವರಣದ ಅಂದರೆ ಕುಸ್ತಿ ಅಖಾಡದ ಎದುರು ವಾಸ್ತವ್ಯ ಹೂಡಲಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ:ಸಿದ್ದರಾಮಯ್ಯ ತಾಳ್ಮೆ ಕಳೆದುಕೊಂಡು ಹುಚ್ಚುಚ್ಚರಾಗಿ ಮಾತನಾಡುತ್ತಿದ್ದಾರೆ: ಯಡಿಯೂರಪ್ಪ ಗರಂ