ಮೈಸೂರು:ಸಿದ್ದರಾಮಯ್ಯ ಅವರ ಟ್ವಿಟರ್ಅನ್ನು ನಾನು ನೋಡಿಲ್ಲ. ಅವರು ನನ್ನನ್ನು ಟಾರ್ಗೆಟ್ ಮಾಡಿಲ್ಲ ಎಂದು ಸಚಿವ ಜಿ.ಟಿ.ದೇವೇಗೌಡ ಹೇಳಿಕೆ ನೀಡಿದ್ದಾರೆ.
ಇಂದು ಖಾಸಗಿ ಹೋಟೆಲ್ನಲ್ಲಿ ಮಾತನಾಡಿದ ಜಿ.ಟಿ.ದೇವೇಗೌಡ, ಸಿದ್ದರಾಮಯ್ಯ ಅವರು ನನ್ನನ್ನು ಟಾರ್ಗೆಟ್ ಮಾಡಿಲ್ಲ. ನನ್ನನ್ನು ಟಾರ್ಗೆಟ್ ಮಾಡ್ತಾರೆ ಅಂತ ಯಾಕೆ ಹೇಳುತ್ತಿದ್ದೀರಿ ಎಂದು ಹೇಳಿದರು.
ಇತ್ತೀಚೆಗೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು ಎಂಬ ಹೇಳಿಕೆಗಳು ಕೇಳಿಬರುತ್ತಿವೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರೇ ನೇರವಾಗಿ ಹೇಳಿದ್ದಾರೆ ಕುಮಾರಸ್ವಾಮಿ ಅವರು 5 ವರ್ಷ ಸಿಎಂ ಆಗಿರ್ತಾರೆ ಅಂತಾ. ಹೀಗೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಜನ ಆಶೀರ್ವಾದ ಮಾಡಿದರೆ ನಾನು ಮುಖ್ಯಮಂತ್ರಿ ಆಗುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ ಎಂದರು.
ಕೆಲಸ ಮಾಡದ ಮಂತ್ರಿಗಳನ್ನು ಕೈ ಬಿಡಿ
ಸಮ್ಮಿಶ್ರ ಸರ್ಕಾರದಲ್ಲಿ ಪಕ್ಷಗಳಿಗೆ ಒಳ್ಳೆಯದಾಗಬೇಕು. ಆ ನಿಟ್ಟಿನಲ್ಲಿ ಯಾವ ಕ್ಷೇತ್ರಗಳಲ್ಲಿ ಮಂತ್ರಿಗಳು ಕೆಲಸ ಮಾಡಿಲ್ಲ ಅವರನ್ನು ಕೈ ಬಿಟ್ಟರೆ ಒಳ್ಳೆಯದು ಎಂದು ಜಿ.ಟಿ.ದೇವೇಗೌಡ ಹೇಳಿದರು. ಇನ್ನು ಮುಂದುವರೆದು ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಸೋತ ಕ್ಷೇತ್ರಗಳ ಮಂತ್ರಿಗಳ ತಲೆದಂಡ ಖಚಿತ ಎಂಬ ಸುಳಿವನ್ನೂ ನೀಡಿದರು.