ಕರ್ನಾಟಕ

karnataka

ETV Bharat / state

ವರುಣಾ ಕ್ಷೇತ್ರದ ಚಿಂತೆ ನನಗಿಲ್ಲ: ಸಿದ್ದರಾಮಯ್ಯ ಟ್ವೀಟ್ - varuna

ಮೈಸೂರಿನ ಖಾಸಗಿ ಹೋಟೆಲ್​ನಲ್ಲಿ ವರುಣಾ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು ದಿನಗಳಿಂದ ಸಭೆ ನಡೆಸಿದ್ದಾರೆ. ಇದೀಗ ಮಹತ್ವದ ಸಭೆಯ ಉದ್ದೇಶವನ್ನು ಟ್ವೀಟರ್​ನಲ್ಲಿ ಹೇಳಿಕೊಂಡಿದ್ದಾರೆ.

ಸಿದ್ದರಾಮಯ್ಯ ಟ್ವೀಟ್​

By

Published : Jun 25, 2019, 4:08 PM IST

Updated : Jun 25, 2019, 4:15 PM IST

ಮೈಸೂರು: ಇಲ್ಲಿನ ಖಾಸಗಿ ಹೋಟೆಲ್​ನಲ್ಲಿ ವರುಣಾ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು ದಿನಗಳಿಂದ ಸಭೆ ನಡೆಸಿದ್ದಾರೆ. ಇದೀಗ ಮಹತ್ವದ ಸಭೆಯ ಉದ್ದೇಶವನ್ನು ಟ್ವೀಟರ್​ನಲ್ಲಿ ಹಂಚಿಕೊಂಡಿದ್ದಾರೆ.

'ಕಾಂಗ್ರೆಸ್ ಪಕ್ಷದ ಬಲವರ್ಧನೆಯ ಅಭಿಯಾನ ವರುಣಾ ಕ್ಷೇತ್ರಕ್ಕೆ ಸೀಮಿತ ಅಲ್ಲ, ಅಲ್ಲಿನ ಚಿಂತೆಯೂ ನನಗಿಲ್ಲ. ಚುನಾವಣಾ ಸೋಲಿನ ನಂತರ ಇಡೀ ರಾಜ್ಯದಲ್ಲಿ ನಮ್ಮ ಪಕ್ಷದ ನಾಯಕರಿಂದ ಈ ಕಾರ್ಯ ನಡೆಯುತ್ತಿದೆ. ಮುಂದಿನ‌ ದಿನಗಳಲ್ಲಿ ಇದನ್ನು ಇನ್ನಷ್ಟು ವ್ಯವಸ್ಥಿತವಾಗಿ ನಡೆಸಲಾಗುವುದು' ಎಂದು ಪೋಸ್ಟ್​ ಮಾಡಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಸೋಲಿನ ಪರಾಮರ್ಶೆ ನಡೆಯುತ್ತಿದ್ದು, ನಾಯಕರು ಪಕ್ಷ ಬಲವರ್ಧನೆಗೆ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಈ ನಿಟ್ಟಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರಿನ ಖಾಸಗಿ ಹೋಟೆಲ್​ನಲ್ಲಿ ಸಭೆ ನಡೆಸಿ ಪಕ್ಷ ಮೇಲೆತ್ತಲು ಕಸರತ್ತು ನಡೆಸುತ್ತಿದ್ದಾರೆ. ಸಭೆ ನಡೆದ ಬಳಿಕ 2 ದಿನಗಳ ಮೀಟಿಂಗ್ ಬಗ್ಗೆ ಈ ರೀತಿಯಾಗಿ ಟ್ವೀಟ್ ಮಾಡಿದ್ದಾರೆ.

Last Updated : Jun 25, 2019, 4:15 PM IST

ABOUT THE AUTHOR

...view details