ಮೈಸೂರು:ಯಾವುದೇ ಪ್ರಯಾಣದ ಇತಿಹಾಸ ಇಲ್ಲದೇ ಇದ್ದರೂ ಪರೀಕ್ಷೆ ಮಾಡಿದಾಗ ಜಿಲ್ಲೆಯ 6 ಮಂದಿಗೆ ಕೋವಿಡ್ ಸೋಂಕು ತಗುಲಿರುವುದು ಪತ್ತೆಯಾಗಿದೆ. ಸೋಂಕಿತರನ್ನು ತುರ್ತು ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತರಲ್ಲಿ 5 ಮಂದಿ 60 ವರ್ಷ ಮೇಲ್ಪಟ್ಟವರಾಗಿದ್ದು, ಒಬ್ಬರು 48 ವರ್ಷ ವಯಸ್ಸಿನ ವ್ಯಕ್ತಿ ಎಂದು ಮೈಸೂರು ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಆರೋಗ್ಯಾಧಿಕಾರಿ ಡಾ.ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.
ಈಗಾಗಲೇ ಇಲಾಖೆಯು ಸರ್ಕಾರದ ಮಾರ್ಗಸೂಚಿಯಂತೆ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಜಿಲ್ಲಾಸ್ಪತ್ರೆಗಳಲ್ಲಿ 1,700ಕ್ಕೂ ಹೆಚ್ಚು ಬೆಡ್ ವ್ಯವಸ್ಥೆಯಾಗಿದೆ. ಜಿಲ್ಲೆಯಿಂದ ಕೇರಳಕ್ಕೆ ತೆರಳುವವರ ಮೇಲೆ ಹಾಗೂ ಕೇರಳದಿಂದ ಬರುವವರ ಮೇಲೆ ನಿಗಾ ವಹಿಸಲಾಗಿದೆ. ಆಶಾ ಕಾರ್ಯಕರ್ತರಿಗೆ ಕೋವಿಡ್ ಅರಿವು ಮೂಡಿಸಲು ಜಿಲ್ಲಾಡಳಿತ ಸಿದ್ದತೆ ಮಾಡಿಕೊಂಡಿದೆ ಎಂದು ಅವರು ತಿಳಿಸಿದರು.