ಮೈಸೂರು :ಸಾಮೂಹಿಕ ಬಹಿಷ್ಕಾರಕ್ಕೊಳಗಾಗಿದ್ದರಿಂದ ನ್ಯಾಯಕ್ಕಾಗಿ ಮಾಧ್ಯಮಗಳ ಮೊರೆ ಹೋದರೆಂದು ಸಂತ್ರಸ್ತ ಕುಟುಂಬ ಸದಸ್ಯರುಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ಇಂದು ಜಿಲ್ಲೆ ಟಿ. ನರಸಿಪುರ ತಾಲೂಕಿನ ಮೂಗೂರು ಗ್ರಾಮದಲ್ಲಿ ನಡೆದಿದೆ.
ಮಾಧ್ಯಮಗಳ ಮುಂದೆ ಹೋದರೆಂದು ಸಮುದಾಯದ ಮುಖಂಡರೇ ಸಂತ್ರಸ್ತರ ಮೇಲೆ ಹಲ್ಲೆ ನಡೆಸಿದ್ದಾರೆಂಬ ಆರೋಪ ಹೇಳಿ ಬಂದಿದೆ. ರಾಘವೇಂದ್ರ ಎಂಬುವರು ಹಾಗೂ ಅವರ ಸಂಬಂಧಿಯ ಮೇಲೆ ಕಲ್ಲಿನಿಂದ ಹೊಡೆದು ಹಲ್ಲೆ ನಡೆಸಿದ್ದಾರೆ. ಸ್ಥಳೀಯರು ಗಾಯಗೊಂಡವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಕರಣದಲ್ಲಿ ಮುಂದುವರಿಯದಂತೆ ತಾಕೀತು ಮಾಡಿದ್ದಾರೆ ಎನ್ನಲಾಗಿದೆ.
ಘಟನೆ ಹಿನ್ನೆಲೆ : ತಮ್ಮ ಜಮೀನಿನಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಾಣ ಮಾಡುತ್ತಿರುವ ಬಗ್ಗೆ ಪ್ರಶ್ನೆ ಮಾಡಿದ್ದಕ್ಕಾಗಿ 12 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ವಿಧಿಸಲಾಗಿತ್ತು.
ಅನ್ಯಾಯದ ಬಗ್ಗೆ ಪ್ರಶ್ನಿಸಿದ್ದಕ್ಕೆ ಬಹಿಷ್ಕಾರ