ಕರ್ನಾಟಕ

karnataka

ETV Bharat / state

ರಸ್ತೆ ಬದಿ ಮರಕ್ಕೆ ಕಾರು ಡಿಕ್ಕಿ: ರಜೆ ಮೇಲೆ ಮನೆಗೆ ಬಂದಿದ್ದ ಸಿಆರ್​ಪಿಎಫ್ ಯೋಧ ಸಾವು - Mysuru car accident news

ಮೃತಪಟ್ಟಿರುವ ಯೋಧ ಮೂಲತ‌ಃ ಪಿರಿಯಾಪಟ್ಟಣ ತಾಲೂಕಿನ ಗೊರಳ್ಳಿಯ ನಾಗರಾಜಶೆಟ್ಟಿ ಎಂಬುವವರ ಪುತ್ರ ಅಣ್ಣಯ್ಯ ಶೆಟ್ಟಿ (35) ಎಂದು ಗುರುತಿಸಲಾಗಿದೆ. ಮೃತರಿಗೆ ಪತ್ನಿ, ಇಬ್ಬರು ಮಕ್ಕಳಿದ್ದಾರೆ ಎಂದು ತಿಳಿದುಬಂದಿದೆ.

ರಜೆಯ ಮೇಲೆ ಮನೆಗೆ ಬಂದಿದ್ದ ಯೋಧ ಸಾವು
ರಜೆಯ ಮೇಲೆ ಮನೆಗೆ ಬಂದಿದ್ದ ಯೋಧ ಸಾವು

By

Published : Jun 5, 2021, 4:55 AM IST

ಮೈಸೂರು:ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸಿಆರ್​ಪಿಎಫ್ ಯೋಧ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಮೈಸೂರು-ಬಂಟ್ವಾಳ ಹೆದ್ದಾರಿಯ ಹುಣಸೂರು ತಾಲೂಕಿನ ಅರಸುಕಲ್ಲಹಳ್ಳಿ ಬಳಿ ಗುರುವಾರ ರಾತ್ರಿ ನಡೆದಿದೆ.

ಮೃತಪಟ್ಟಿರುವ ಯೋಧ ಮೂಲತ‌ಃ ಪಿರಿಯಾಪಟ್ಟಣ ತಾಲೂಕಿನ ಗೊರಳ್ಳಿಯ ನಾಗರಾಜಶೆಟ್ಟಿ ಎಂಬುವವರ ಪುತ್ರ ಅಣ್ಣಯ್ಯ ಶೆಟ್ಟಿ (35) ಎಂದು ಗುರುತಿಸಲಾಗಿದೆ. ಮೃತರಿಗೆ ಪತ್ನಿ, ಇಬ್ಬರು ಮಕ್ಕಳಿದ್ದಾರೆ ಎಂದು ತಿಳಿದುಬಂದಿದೆ.

ಪ್ರಸ್ತುತ ಮಹರಾಷ್ಟ್ರದ ನಕ್ಸಲ್ ಏರಿಯಾದ ಗಡ್ಸರ್‌ನಲ್ಲಿ 14 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಇವರು, ಎರಡು ದಿನಗಳ ಹಿಂದೆಯಷ್ಟೆ ರಜೆ ಮೇಲೆ ಊರಿಗೆ ಬಂದಿದ್ದರು. ಮೈಸೂರಿನಲ್ಲಿ ಕೆಲಸ ಮುಗಿಸಿಕೊಂಡು ತಮ್ಮ ಕಾರಿನಲ್ಲಿ ಗುರುವಾರ ರಾತ್ರಿ ಊರಿಗೆ ತೆರಳುತ್ತಿದ್ದ ವೇಳೆ, ತಾಲೂಕಿನ ಕಲ್ಲಹಳ್ಳಿ ಗೇಟ್‌ನ ಬಳಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಗುದ್ದಿದ್ದಾರೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಅಣ್ಣಯ್ಯ ಶೆಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಶುಕ್ರವಾರ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಗ್ರಾಮಾಂತರ ಠಾಣಾ ಪೊಲೀಸರು ಮೃತದೇಹವನ್ನು ಹೊರ ತೆಗೆದು, ಹುಣಸೂರು ಶವಾಗಾರದಲ್ಲಿ ಪೋಸ್ಟ್​ ಮಾರ್ಟಂ​ ಮಾಡಿಸಿ ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.

ಇದನ್ನು ಓದಿ: ಕಿಡಿಗೇಡಿಗಳ ಅಟ್ಟಹಾಸಕ್ಕೆ ಎರಡು ಚಿರತೆ ಬಲಿ

ABOUT THE AUTHOR

...view details