ಮೈಸೂರು: ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರನ್ನು ಭೇಟಿ ಮಾಡಿದ ವಿ.ಸೋಮಣ್ಣ ಅವರ ಆರೋಗ್ಯ ವಿಚಾರಿಸಿದರು.
ದೊಡ್ಡಗೌಡರನ್ನು ಭೇಟಿ ಮಾಡಿದ ಸಚಿವ ವಿ. ಸೋಮಣ್ಣ - ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
ಕಾರ್ಯಕರ್ತರ ಸಮಾವೇಶಕ್ಕೆ ಹೋಗುವ ಮುನ್ನ ಚಾಮುಂಡಿಬೆಟ್ಟಕ್ಕೆ ತೆರಳಿ ಜಲದರ್ಶಿನಿ ಅತಿಥಿ ಗೃಹದಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಎಚ್.ಡಿ.ದೇವೇಗೌಡ ಅವರನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಭೇಟಿ ಮಾಡಿದರು.
ದೊಡ್ಡಗೌಡರನ್ನು ಭೇಟಿ ಮಾಡಿದ ಸಚಿವ ವಿ. ಸೋಮಣ್ಣ
ಇಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಕಾರ್ಯಕರ್ತರ ಸಮಾವೇಶಕ್ಕೆ ಹೋಗುವ ಮುನ್ನ ಚಾಮುಂಡಿ ಬೆಟ್ಟಕ್ಕೆ ಹೋಗಿ ಚಾಮುಂಡಿದೇವಿಯ ದರ್ಶನ ಪಡೆದು ನಂತರ ಜಲ ದರ್ಶಿನಿ ಅತಿಥಿ ಗೃಹದಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು.
ಆ ಸಂದರ್ಭದಲ್ಲಿ ಅಲ್ಲಿಗೆ ಆಗಮಿಸಿದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ದೇವೇಗೌಡರ ಕೊಠಡಿಗೆ ತೆರಳಿ ಅವರ ಪಕ್ಕದಲ್ಲೇ ಕುಳಿತು ಆರೋಗ್ಯ ವಿಚಾರಿಸಿ ನಮಸ್ಕರಿಸಿ ಹೊರಟು ಹೋದರು.