ಮೈಸೂರು: ಹಳೆ ಮೈಸೂರು ಭಾಗದಲ್ಲಿ ಐದಾರು ಮಂದಿ ಘಟಾನುಘಟಿ ನಾಯಕರು ಬಿಜೆಪಿ ಸೇರ್ಪಡೆ ಆಗಲಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ನ ಎರಡೂ ಪಕ್ಷದವರು ಇದ್ದಾರೆ ಎಂದು ಮೈಸೂರು ಉಸ್ತುವಾರಿ ಹಾಗೂ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ಶುಕ್ರವಾರದಿಂದ ವಿಧಾನ ಪರಿಷತ್ತಿನ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣಾ ಪ್ರಚಾರ ಆರಂಭಿಸಿರುವ ಸಚಿವರು, ಸುದ್ದಿಗಾರರೊಂದಿಗೆ ಮಾತನಾಡಿ, ಬೇರೆ ಪಕ್ಷಗಳ ನಾಯಕರು ಬಿಜೆಪಿಗೆ ಸೇರುವ ಬಗ್ಗೆ ಚರ್ಚೆ ಆಗುತ್ತಿದೆ. ಈಗಾಗಲೇ ಐದಾರು ಜನ ನಾಯಕರುಗಳು ಯಾವುದೇ ಷರತ್ತಿಲ್ಲದೇ ಬಿಜೆಪಿ ಸೇರಲು ಒಪ್ಪಿದ್ದಾರೆ. ಪಕ್ಷಕ್ಕೆ ಸೇರ್ಪಡೆ ಬಗ್ಗೆ ಅಧ್ಯಕ್ಷರು ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.
ಕಾಂಗ್ರೆಸ್ ಇಬ್ಭಾಗವಾಗಲಿದೆ:ಕಾಂಗ್ರೆಸ್ನಲ್ಲಿ ಆಂತರಿಕ ಬಿಕ್ಕಟ್ಟು ಉಂಟಾಗಿದೆ. ಎಐಸಿಸಿ ನಾಯಕತ್ವ ದುರ್ಬಲ ಆಗುತ್ತಿದ್ದಂತೆ ಇಲ್ಲಿ ಎಲ್ಲರೂ ನಾಯಕರು ಆಗಲು ಹೊರಟಿದ್ದಾರೆ. ಪರಿಸ್ಥಿತಿ ಇನ್ನೂ ವಿಕೋಪಕ್ಕೆ ಹೋಗಿ ಕಾಂಗ್ರೆಸ್ ಪಕ್ಷ ಇಬ್ಭಾಗವಾಗಲಿದೆ ಎಂದು ಸೋಮಶೇಖರ್ ಭವಿಷ್ಯ ನುಡಿದರು.