ಕರ್ನಾಟಕ

karnataka

ETV Bharat / state

ಶ್ರೀರಾಮುಲುರನ್ನು ಕೆಲ ಸಚಿವರು ಕಡೆಗಣಿಸುತ್ತಿದ್ದಾರೆ ; ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆ ಆರೋಪ - ಮೈಸೂರು ಸುದ್ದಿ

ಶ್ರೀರಾಮುಲುರನ್ನು ರಾಜಕೀಯವಾಗಿ ತುಳಿಯುವ ಹುನ್ನಾರ ನಡೆಯುತ್ತಿರಬಹುದು ಎಂಬ ಅನುಮಾನ ವ್ಯಕ್ತವಾಗುತ್ತಿದೆ. ರಾಮುಲು ಅವರಿಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವುದಕ್ಕೆ ಅವಕಾಶ ಕೊಡದೆ ಬೇರೆ ಸಚಿವರು ಸುಮ್ಮನೆ ಕೂರಿಸಿದ್ದರು..

Some ministers are ignoring B Shriramulu
ರಾಜ್ಯ ನಾಯಕರ ಹಿತರಕ್ಷಣಾ ವೇದಿ

By

Published : Jul 28, 2020, 7:14 PM IST

ಮೈಸೂರು :ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲುರನ್ನು ಕೆಲ ಸಚಿವರು ಕಡೆಗಣಿಸುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದೆ.

ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕರ್ನಾಟಕ ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆಯ ದ್ಯಾವಪ್ಪನಾಯಕ, ಸಚಿವ ಶ್ರೀರಾಮುಲುರನ್ನು ಇತರ ಸಚಿವರುಗಳು ಕಡೆಗಣಿಸುತ್ತಿದ್ದಾರೆ. ಶ್ರೀರಾಮುಲು ಚುನಾವಣಾ ಸಂದರ್ಭದಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಪ್ರಚಾರ ಮಾಡಿ ಬಿಜೆಪಿ ಪಕ್ಷ ಗೆಲ್ಲಲು ಕಾರಣರಾಗಿದ್ದಾರೆ ಎಂದು ಸಮರ್ಥಿಸಿದರು.

ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆ ಆರೋಪ-1

ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದರೆ ಪರಿಶಿಷ್ಟ ಪಂಗಡಕ್ಕೆ ಶೇ.7.5 ಮೀಸಲಾತಿ ನೀಡುತ್ತೇವೆ ಎಂದು ಭರವಸೆ ನೀಡಿತ್ತು. ಆದರೆ, ಅದನ್ನು ಈವರೆಗೂ ಈಡೇರಿಸಿಲ್ಲ. ರಾಮುಲು ಅವರಿಗೆ ಉಪಮುಖ್ಯಮಂತ್ರಿ ಸ್ಥಾನವನ್ನು ಸಹ ನೀಡಿಲ್ಲ. ಜೊತೆಗೆ ಕೇಂದ್ರ ಸಚಿವ ಅಮಿತ್ ಶಾ, ಚಿತ್ರದುರ್ಗದಲ್ಲಿ ಮದಕರಿ ನಾಯಕರ ಸ್ಮಾರಕ ನಿರ್ಮಿಸುವುದಾಗಿ ಭರವಸೆ ನೀಡಿದ್ದರು. ಅದು ಸಹ ಆಗಿಲ್ಲ. ಶ್ರೀರಾಮುಲು ಕೊರೊನಾ ಸಂದರ್ಭದಲ್ಲಿ ದಕ್ಷತೆಯಿಂದ ಕೆಲಸ ಮಾಡಿದ್ದಾರೆ. ಆಸ್ಪತ್ರೆಗಳಿಗೆ ಭೇಟಿ ನೀಡಿ ರೋಗಿಗಳನ್ನು ವಿಚಾರಿಸಿ ಧೈರ್ಯ ತುಂಬಿದ್ದಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ಕೆಲ ಸಚಿವರು ಅನಾವಶ್ಯಕವಾಗಿ ಆರೋಗ್ಯ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುವ ಮೂಲಕ ಅವರನ್ನು ಕಡೆಗಣಿಸಿದ್ದಾರೆ.

ಶ್ರೀರಾಮುಲುರನ್ನು ರಾಜಕೀಯವಾಗಿ ತುಳಿಯುವ ಹುನ್ನಾರ ನಡೆಯುತ್ತಿರಬಹುದು ಎಂಬ ಅನುಮಾನ ವ್ಯಕ್ತವಾಗುತ್ತಿದೆ. ರಾಮುಲು ಅವರಿಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವುದಕ್ಕೆ ಅವಕಾಶ ಕೊಡದೆ ಬೇರೆ ಸಚಿವರು ಸುಮ್ಮನೆ ಕೂರಿಸಿದ್ದರು. ಅವರ ಇಲಾಖೆಗೆ ಸಂಬಂಧವಿಲ್ಲದ ಸಚಿವರು ಆರೋಗ್ಯ ಇಲಾಖೆಯ ಬಗ್ಗೆ ಮೂಗು ತೂರಿಸಿದರೆ ಮುಂದಿನ ದಿನಗಳಲ್ಲಿ ಸರ್ಕಾರದ ವಿರುದ್ಧ ಅಭಿಮಾನಿಗಳು ಹಾಗೂ ಸಮುದಾಯದ ಬಂಧುಗಳು ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆ ಆರೋಪ-2

ಶ್ರೀರಾಮುಲುರನ್ನು ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಅವಕಾಶ ನೀಡಬೇಕು ಹಾಗೂ ಮುಂದಿನ ಸಚಿವ ಸಂಪುಟದ ವಿಸ್ತರಣೆ ಸಂದರ್ಭದಲ್ಲಿ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಆಗ್ರಹಿಸಿದರು.

ABOUT THE AUTHOR

...view details