ಮೈಸೂರು: ಅವಿಶ್ವಾಸ ನಿರ್ಣಯದ ಬಗ್ಗೆ ಸ್ಪೀಕರ್ ಅವರು ನಿರ್ಣಯ ತೆಗೆದುಕೊಳ್ಳುತ್ತಾರೆ ಎಂದು ಸಚಿವ ಹೆಚ್.ಡಿ.ರೇವಣ್ಣ ರಾಜ್ಯಪಾಲರ ಆದೇಶದ ಬಗ್ಗೆ ಚಾಮುಂಡಿ ಬೆಟ್ಟದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಅವಿಶ್ವಾಸ ನಿರ್ಣಯದ ಬಗ್ಗೆ ಸ್ಪೀಕರ್ ತೀರ್ಮಾನ ಕೈಗೊಳ್ಳುತ್ತಾರೆ: ಸಚಿವ ರೇವಣ್ಣ
ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ನಿರ್ಣಯ ತೆಗೆದುಕೊಳ್ಳುತ್ತಾರೆ ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ ರೇವಣ್ಣ ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ.
ಇಂದು 3 ನೇ ಆಷಾಢ ಶುಕ್ರವಾರದ ನಿಮಿತ್ತ ಚಾಮುಂಡಿ ಬೆಟ್ಟಕ್ಕೆ ಬಂದ ಸಚಿವ ಹೆಚ್. ಡಿ. ರೇವಣ್ಣ ಸತತ 3ನೇ ವಾರ ಕೂಡ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದು ಮಾಧ್ಯಮಗಳ ಜೊತೆ ಮಾತನಾಡಿದ ಅವರು ಅವಿಶ್ವಾಸ ನಿರ್ಣಯದ ಬಗ್ಗೆ ನಾವೇ ರಾಜ್ಯಪಾಲರ ಬಳಿ ಸಮಯ ಕೇಳಿದ್ದೆವು. ಸಭೆಗೆ ಬಿಜೆಪಿ ಅವರು ಬರಲಿಲ್ಲ ಆದರೆ ಈ ಬಗ್ಗೆ 3 ದಿನಾಂಕಗಳು ನಿಗದಿಯಾಗಿದ್ದು ನಿನ್ನೆ ಈ ವಿಚಾರದ ಬಗ್ಗೆ ಚರ್ಚೆ ನಡೆದಿದೆ. ಈ ಬಗ್ಗೆ ರಾಜ್ಯಪಾಲರು ಅವಿಶ್ವಾಸ ನಿರ್ಣಯದ ಮೇಲೆ ಓಟು ಹಾಕುವಂತೆ ಕುಮಾರಸ್ವಾಮಿ ಅವರಿಗೆ ಸೂಚಿಸಿದ್ದಾರೆ. ಈ ಬಗ್ಗೆ ಸ್ಪೀಕರ್ ಅವರು ತಿರ್ಮಾನ ಕೈಗೊಳ್ಳುತ್ತಾರೆ ಎಂದ್ರು.
ಸುಪ್ರೀಂ ಕೋರ್ಟ್ ನ ತೀರ್ಪಿನ ಹಿನ್ನೆಲೆ ಕೆಲವು ವಿಚಾರಗಳನ್ನು ಸ್ಪಷ್ಟ ಪಡಿಸಬೇಕಾಗಿದ್ದು ಇದರಿಂದ ಚರ್ಚೆ ನಡೆಯುತ್ತಿದೆ. ಅವಿಶ್ವಾಸ ನಿರ್ಣಯ ವಿಚಾರದಲ್ಲಿ 1996 ರಲ್ಲಿ ಅಂದಿನ ಪ್ರಧಾನಿ ವಾಜಪೇಯಿ ಅವರು 10 ದಿನ ಕಾಲಾವಕಾಶ ತೆಗೆದುಕೊಳ್ಳಲಿಲ್ಲವೆ ಎಂದು ಸಚಿವ ರೇವಣ್ಣ ಪತ್ರಕರ್ತರನ್ನು ಪ್ರಶ್ನೆ ಮಾಡಿದ್ರು.