ಮೈಸೂರು:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಡಿಯೋ ಸಾಕ್ಷಿಯಾಗಿ ನಿಲ್ಲುವುದಿಲ್ಲ ಎಂದು ಚಾಮರಾಜನಗರ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದರು.
ಮೈಸೂರಿನಲ್ಲಿ ಜಯಲಕ್ಷ್ಮಿಪುರಂನಲ್ಲಿರುವ ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹುಬ್ಬಳಿಯಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮುಖ್ಯಮಂತ್ರಿಗಳ ಆಡಿಯೋ ವೈರಲ್ ಪ್ರಕರಣ ಕೋಟ್೯ ಪರಿಗಣಿಸುವುದಿಲ್ಲ ಎಂದು ಹೇಳಿದೆ. ಇದು ಸಾಕ್ಷಿಯಾಗಿ ನಿಲ್ಲುವುದಿಲ್ಲ ಎಂದೂ ಸಮರ್ಥನೆ ಮಾಡಿಕೊಂಡಿದ್ದಾರೆ.
ಬಿಎಸ್ವೈ ಅವರ ಆಡಿಯೋ, ಸಾಕ್ಷಿಯಾಗಿ ನಿಲ್ಲುವುದಿಲ್ಲ: ಶ್ರೀನಿವಾಸ್ ಪ್ರಸಾದ್ ಬಿಜೆಪಿಗೆ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಮೃದು ಧೋರಣೆ ತೋರುತ್ತಿರುವ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷಗಳ ಮುಖಂಡರು ತೀರ್ಮಾನ ಮಾಡ್ತಾರೆ. ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು. ಹುಣಸೂರು ವಿಧಾನಸಭಾ ಉಪಚುನಾವಣೆ ಪ್ರಚಾರಕ್ಕೆ ಹೋಗುತ್ತೀನಿ. ಪಕ್ಷದ ಬಲವರ್ಧನೆಗೆ ಕೈಜೋಡಿಸುತ್ತೀನಿ. ಸಕ್ರಿಯವಾಗಿ ಪ್ರಚಾರದಲ್ಲಿ ತೊಡಗಿಕೊಳ್ಳುತ್ತೀನಿ ಎಂದು ಹೇಳಿದರು.
ಕೇಂದ್ರ ಸರ್ಕಾರ ಮೊದಲ ಹಂತದಲ್ಲಿ ₹1200 ಕೋಟಿ ರಾಜ್ಯಕ್ಕೆ ಬಿಡುಗಡೆ ಮಾಡಿದೆ. ಎರಡನೇ ಹಂತದಲ್ಲಿ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರ ಒತ್ತಾಯ ಮಾಡಬೇಕು ಎಂದು ಇದೇ ವೇಳೆ ಒತ್ತಾಯಿಸಿದರು