ಮೈಸೂರು: ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ ಡೇಟ್ ಫಿಕ್ಸ್ ಆಗುತ್ತಿದ್ದಂತೆ ಅಧಿಕಾರದ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಪೈಪೋಟಿ ಪ್ರಾರಂಭವಾಗಿದೆ.
ಮೈಸೂರು ಮೇಯರ್ ಚುನಾವಣೆ: ಜೆಡಿಎಸ್ 'ಸಹಕಾರ' ಕೇಳಿದ ಎಸ್.ಟಿ.ಸೋಮಶೇಖರ್ - ಮಹಾನಗರ ಪಾಲಿಕೆ ಮೇಯರ್ ಚುನಾವಣೆ
ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ ಬೆಂಬಲ ನೀಡುವಂತೆ ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ಅವರನ್ನು ಶುಕ್ರವಾರ ರಾತ್ರಿ ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆ.
ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರು ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ ಬೆಂಬಲ ನೀಡುವಂತೆ ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ಅವರನ್ನು ಶುಕ್ರವಾರ ರಾತ್ರಿ ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆ. ಈ ವೇಳೆ ಸಚಿವರಿಗೆ ಸಂಸದ ಪ್ರತಾಪ್ ಸಿಂಹ, ಶಾಸಕ ಎಲ್.ನಾಗೇಂದ್ರ, ನಗರಾಧ್ಯಕ್ಷ ಶ್ರೀವತ್ಸ ಸಾಥ್ ನೀಡಿದರು.
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಎಸ್.ಟಿ.ಸೋಮಶೇಖರ್, ಮೇಯರ್ ಚುನಾವಣೆಗೆ ಬೆಂಬಲ ನೀಡುವಂತೆ ಕೋರಿ ಶಾಸಕ ಸಾ.ರಾ ಮಹೇಶ್ ಅವರನ್ನ ಭೇಟಿ ಮಾಡಿ, ಸೌಹಾರ್ದಯುತ ಮಾತುಕತೆ ನಡೆಸಿದ್ದೇನೆ. ಇನ್ನೆರಡು ದಿನಗಳಲ್ಲಿ ಅವರು ಅಭಿಪ್ರಾಯ ತಿಳಿಸಲಿದ್ದಾರೆ. ಸಾ.ರಾ ಮಹೇಶ್ ಒಬ್ಬರೇ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಿಲ್ಲ. ಈ ಕುರಿತು ನಮ್ಮ ರಾಜ್ಯಾಧ್ಯಕ್ಷರು-ಜೆಡಿಎಸ್ ರಾಜ್ಯಾಧ್ಯಕ್ಷರು ಮಾತುಕತೆ ನಡೆಸಲಿದ್ದಾರೆ ಎಂದು ತಿಳಿಸಿದರು.