ಕರ್ನಾಟಕ

karnataka

ETV Bharat / state

ಕೊರೊನಾ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ: ಎಸ್.ಟಿ.ಸೋಮಶೇಖರ್ - ಕೊರೊನಾ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ: ಸಚಿವ ಎಸ್.ಟಿ.ಸೋಮಶೇಖರ್

ಕೋವಿಡ್ ನಿಯಂತ್ರಣಾ ಕ್ರಮಗಳನ್ನು ಚುರುಕುಗೊಳಿಸಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಈಗಾಗಲೇ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಜ.8 ಮತ್ತು 9 ರಂದು ವಾರಾಂತ್ಯ ಕರ್ಫ್ಯೂ ಇರಲಿದೆ. ವಾರಾಂತ್ಯ ಕರ್ಫ್ಯೂನಲ್ಲಿ ಅಗತ್ಯ ಸೇವೆಗಳಿಗೆ ಅವಕಾಶ ನೀಡಲಾಗಿದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಸಚಿವ ಎಸ್.ಟಿ.ಸೋಮಶೇಖರ್
ಸಚಿವ ಎಸ್.ಟಿ.ಸೋಮಶೇಖರ್

By

Published : Jan 7, 2022, 9:51 PM IST

ಮೈಸೂರು: ರಾಜ್ಯದಲ್ಲಿ ಇತ್ತೀಚೆಗೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದನ್ನು ಮನಗಂಡ ರಾಜ್ಯ ಸರ್ಕಾರಕ್ಕೆ ಕೋವಿಡ್ ನಿಯಂತ್ರಣಕ್ಕೆ ಕೆಲವು ಬಿಗಿ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯವಾಗಿದೆ. ಸರ್ಕಾರದ ಕ್ರಮಕ್ಕೆ ಸಾರ್ವಜನಿಕರು ಸಹಕರಿಸುವಂತೆ ಸಚಿವ ಎಸ್.ಟಿ.ಸೋಮಶೇಖರ್ ಮನವಿ ಮಾಡಿದ್ದಾರೆ.

ವಾರಾಂತ್ಯ ಕರ್ಫ್ಯೂ ಹಿನ್ನೆಲೆಯಲ್ಲಿ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಸಚಿವರು, ಕೋವಿಡ್ ನಿಯಂತ್ರಣಾ ಕ್ರಮಗಳನ್ನು ಚುರುಕುಗೊಳಿಸಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಈಗಾಗಲೇ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಜ.8 ಮತ್ತು 9 ರಂದು ವಾರಾಂತ್ಯ ಕರ್ಫ್ಯೂ ಇರಲಿದೆ. ವಾರಾಂತ್ಯ ಕರ್ಫ್ಯೂನಲ್ಲಿ ಅಗತ್ಯ ಸೇವೆಗಳಿಗೆ ಅವಕಾಶ ನೀಡಲಾಗಿದೆ. ಸರ್ಕಾರ ಹೊರಡಿಸಿರುವ ಕೋವಿಡ್ ನಿಯಂತ್ರಣ ಮಾರ್ಗಸೂಚಿ ಕ್ರಮಗಳನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ.

ವಾರಾಂತ್ಯದ ಕರ್ಪ್ಯೂವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಪೊಲೀಸ್ ಇಲಾಖೆಯಿಂದ ಚೆಕ್ ಪೊಸ್ಟ್ ಗಳನ್ನು ಹಾಕಲಾಗಿದೆ. ಸಾರ್ವಜನಿಕರು ಅನಗತ್ಯವಾಗಿ ಸಂಚರಿಸಬಾರದು. ಪೊಲೀಸ್, ಅಧಿಕಾರಿಗಳೊಂದಿಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಸಚಿವರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಎರಡನೇ ಡೋಸ್ ಲಸಿಕೆ ಹಾಕಿಸುವ ಪ್ರಮಾಣ ಶೇ.100ರಷ್ಟು ತಲುಪಬೇಕು. ರೋಗ ಲಕ್ಷಣಗಳು ಕಂಡುಬಂದಾಕ್ಷಣ ಹೋಂ ಐಸೋಲೇಶನ್ ನಲ್ಲಿದ್ದು ಚಿಕಿತ್ಸೆ ಪಡೆದುಕೊಳ್ಳಬಹುದು ಅಥವಾ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಬಹುದು. ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪೂರೈಕೆ, ಹಾಸಿಗೆಗಳು, ವೆಂಟಿಲೇಟರ್ ಲಭ್ಯತೆ ಸೇರಿದಂತೆ ಕೋವಿಡ್ ರೋಗಿಗಳ ಚಿಕಿತ್ಸೆಗೆ ಬೇಕಿರುವ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಲಾಗಿದೆ. ಸಾರ್ವಜನಿಕರು ಆತಂಕಗೊಳ್ಳುವುದು ಬೇಡ ಎಂದು ಸಚಿವರು ಹೇಳಿದ್ದಾರೆ.

For All Latest Updates

TAGGED:

ABOUT THE AUTHOR

...view details