ಮೈಸೂರು:ನಗರದ ಕೆ ಆರ್ ಎಸ್ ರಸ್ತೆಯಲ್ಲಿರುವ ಪಿಕೆಟಿವಿ ಆಸ್ಪತ್ರೆಯ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ 250 ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಗುರುವಾರ ಉದ್ಘಾಟಿಸಿದರು.
ಬಳಿಕ ಈ ಕುರಿತು ಮಾತನಾಡಿದ ಅವರು, ಸೂಪರ್ ಸ್ಪೆಷಾಲಿಟಿಯಲ್ಲಿ 40 ಆಕ್ಸಿಜನೈಟೆಡ್ ಬೆಡ್ ಗಳ ವ್ಯವಸ್ಥೆ ಮಾಡಿ ಚಾಲನೆ ನೀಡಿದ್ದು, 4 ರಿಂದ 5 ದಿನಗಳಲ್ಲಿ ಬೆಡ್‌ಗಳನ್ನು ಹೆಚ್ಚು ಮಾಡಲಾಗುತ್ತದೆ ಎಂದು ತಿಳಿಸಿದರು.
ಇಂದು ಬೆಳಗ್ಗೆ ತುಳಸಿ ದಾಸಪ್ಪ ಆಸ್ಪತ್ರೆಯನ್ನೂ ಸಹ ಉದ್ಘಾಟಿಸಲಾಗಿದ್ದು, ಆ ಆಸ್ಪತ್ರೆಯನ್ನು ಸಹ 100 ಆಕ್ಸಿಜನೈಟೆಡ್ ಬೆಡ್ ಗಳನ್ನಾಗಿ ಮಾಡಲಾಗುತ್ತದೆ. ಮೈಸೂರು ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಸಾಮಾನ್ಯವಾಗಿ ಎಲ್ಲರು ಆಕ್ಸಿಜನೈಟೆಡ್ ಬೆಡ್‌ಗಳನ್ನು ಕೇಳುತ್ತಿದ್ದಾರೆ ಎಂದರು.
ಸಚಿವ ಎಸ್ ಟಿ ಸೋಮಶೇಖರ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಲೋಕಾರ್ಪಣೆ ಎನ್.ಆರ್.ಕ್ಷೇತ್ರದ ಬೀಡಿ ಕಾಲೋನಿಯ ಆಸ್ಪತ್ರೆಯನ್ನು ಬಳಸಿಕೊಂಡು ಆ ಆಸ್ಪತ್ರೆಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ 100 ಆಕ್ಸಿಜನೈಟೆಡ್ ಬೆಡ್‌ಗಳನ್ನು ಮಾಡಲು ಈಗಾಗಲೇ ಚಿಂತಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಆಸ್ಪತ್ರೆಗೆ ಅವಶ್ಯಕತೆ ಇರುವ ವೈದ್ಯರನ್ನು ಹಾಗೂ ನಸ್೯ಗಳನ್ನು ಹಾಗೂ ಸ್ಪೆಷಲಿಸ್ಟ್ ಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಈ ಮೂಲಕ ಕೋವಿಡ್ ರೋಗಿಗಳಿಗೆ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಜಿಲ್ಲಾಡಳಿತ ಸಿದ್ಧವಿದೆ ಎಂದು ಹೇಳಿದರು.
ಸೂಪರ್ ಸ್ಪೆಷಲಿಟಿ ಆಸ್ಪತ್ರೆಯನ್ನು ಮುಖ್ಯಮಂತ್ರಿಗಳು ಉದ್ಘಾಟಿಸಬೇಕಾಗಿತ್ತು. ಇದು ಶಾಸಕ ನಾಗೇಂದ್ರ ಅವರ ಕನಸಾಗಿತ್ತು. ಆದರೆ ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಉದ್ಘಾಟನೆ ಮಾಡಲು ಸಾಧ್ಯವಾಗುವುದಿಲ್ಲ ಎಂದು ವಿವರಿಸಿದರು.
ಓದಿ:ಆರ್ಥಿಕ ವಹಿವಾಟು ಸ್ಥಗಿತ, ರಾಜ್ಯದಲ್ಲಿ ಮತ್ತೆ ಏರಿಕೆಯಾಗ್ತಿದೆ ನಿರುದ್ಯೋಗ