ಕರ್ನಾಟಕ

karnataka

ETV Bharat / state

ಗಲಭೆಗೆ ಕಾರಣವಾದ ಸಂಘಟನೆಯ ಬ್ಯಾನ್ ಬಗ್ಗೆ ಕ್ಯಾಬಿನೆಟ್​ನಲ್ಲಿ ಚರ್ಚೆ ಮಾಡುತ್ತೇವೆ: ಸಚಿವ ಸೋಮಶೇಖರ್ - ಎಸ್.ಡಿ.ಪಿ.ಐ ಸಂಘಟನೆ ಬ್ಯಾನ್

ಬೆಂಗಳೂರು ಗಲಭೆಗೆ ಸಂಬಂಧಿಸಿ ಸಂಘಟನೆಯನ್ನು ಬ್ಯಾನ್ ಮಾಡುವ ಕುರಿತು ಕ್ಯಾಬಿನೆಟ್​ನಲ್ಲಿ ಚರ್ಚೆ ಮಾಡಿ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

st somashekhar
st somashekhar

By

Published : Aug 15, 2020, 3:48 PM IST

ಮೈಸೂರು: ಬೆಂಗಳೂರು ಗಲಭೆಗೆ ಸಂಬಂಧಿಸಿದಂತೆ ಕಾರಣವಾದ ಸಂಘಟನೆಯನ್ನು ಬ್ಯಾನ್ ಮಾಡುವ ಬಗ್ಗೆ ಕ್ಯಾಬಿನೆಟ್​ನಲ್ಲಿ ಚರ್ಚೆ ಮಾಡುತ್ತೇವೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿಕೆ ನೀಡಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಎಸ್.ಟಿ. ಸೋಮಶೇಖರ್, ಎಮ್.ಎಲ್.ಸಿ ಪುತ್ರ ಹುಣಸೂರು ಶಾಸಕರ ಬಗ್ಗೆ ಮಾತನಾಡಿರುವ ವಿಚಾರ ಸ್ಥಳೀಯ ವ್ಯಕ್ತಿಗಳಿಗೆ ಸಂಬಂಧಿಸಿದ್ದು, ಇದರ ವಾಸ್ತವಾಂಶವನ್ನು ಮೈಸೂರು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ತನಿಖೆ ಮಾಡುವಂತೆ ಹೇಳಿದ್ದೇನೆ. ಅವರು ನಾಳೆ ನನಗೆ ಮಾಹಿತಿ ನೀಡಲಿದ್ದಾರೆ ಎಂದರು.

ಸಚಿವ ಎಸ್.ಟಿ.ಸೋಮಶೇಖರ್

ಬೆಂಗಳೂರು ಗಲಭೆಗೆ ಸಂಬಂಧಿಸಿದ ಸಂಘಟನೆಗಳನ್ನು ಬ್ಯಾನ್ ಮಾಡಿ ಎಂದು ಕಾಂಗ್ರೆಸ್​ನ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಈ ವಿಚಾರವನ್ನು ಕ್ಯಾಬಿನೆಟ್​ನಲ್ಲಿ ಚರ್ಚೆ ಮಾಡಿ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಮೊದಲು ಸುಪ್ರೀಂ ಕೋರ್ಟ್ ಹೇಳಿದಂತೆ ಪ್ರಾಪರ್ಟಿ ನಷ್ಟ ಮಾಡಿರುವವರಿಂದ ಲಾಸ್ ವಸೂಲಿ ಮಾಡುವುದು ನಮ್ಮ ಉದ್ದೇಶ, ಇವೆಲ್ಲವನ್ನು ಕ್ಯಾಬಿನೆಟ್​ನಲ್ಲಿ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು.

ಮೈಸೂರು ಭಾಗದಲ್ಲಿ ಎಸ್​ಡಿಪಿಐ ಸಂಘಟನೆ ಸಕ್ರಿಯವಾಗಿದ್ದು, ಇದರ ಬಗ್ಗೆ ಸಹ ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತೇನೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ABOUT THE AUTHOR

...view details