ಮೈಸೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ ಅಧಿಕಾರಾವಧಿ ಪೂರ್ಣಗೊಳಿಸಲಿದ್ದಾರೆ. ಅವರ ನೇತೃತ್ವದಲ್ಲಿಯೇ ಮುಂದಿನ ಚುನಾವಣೆ ಎದುರಿಸುತ್ತೇವೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ: ಸಚಿವ ಮುರುಗೇಶ್ ನಿರಾಣಿ - ಸಚಿವ ಮುರುಗೇಶ್ ನಿರಾಣಿ ಹೇಳಿಕೆ
ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಇಲ್ಲ. ಆದರೆ ಅದನ್ನು ಶೇಖರಣೆ ಮಾಡಲು ಕಂಟೈನರ್ ಕೊರತೆ ಇದೆ. ಸಿಲಿಂಡರ್ಗಳ ಕೊರತೆಯಿಂದ ಸಮಸ್ಯೆಯಾಗುತ್ತಿದೆ. ಹಾಗಾಗಿ ಕಲಬುರಗಿಯಲ್ಲಿ ಪ್ರತಿನಿತ್ಯ 500 ಸಿಲಿಂಡರ್ ಹಾಗೂ ಕಂಟೈನರ್ಗಳನ್ನು ತಯಾರಿಸುವ ಕಾರ್ಯ ಆರಂಭವಾಗಿದೆ ಎಂದು ಸಚಿವ ಮುರುಗೇಶ್ ನಿರಾಣಿ ತಿಳಿಸಿದರು.
ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಮಾಡುವುದಿಲ್ಲ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ರಾಜ್ಯಾಧ್ಯಕ್ಷರು ಸ್ಪಷ್ಟಪಡಿಸಿದ್ದಾರೆ. ಇದೆಲ್ಲ ಊಹಪೋಹ ಎಂದರು.
ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಇಲ್ಲ. ಆದರೆ ಅದನ್ನು ಶೇಖರಣೆ ಮಾಡಲು ಕಂಟೈನರ್ ಕೊರತೆ ಇದೆ. ಸಿಲಿಂಡರ್ಗಳ ಕೊರತೆಯಿಂದ ಸಮಸ್ಯೆಯಾಗುತ್ತಿದೆ. ಹಾಗಾಗಿ ಕಲಬುರಗಿಯಲ್ಲಿ ಪ್ರತಿನಿತ್ಯ 500 ಸಿಲಿಂಡರ್ ಹಾಗೂ ಕಂಟೈನರ್ಗಳನ್ನು ತಯಾರಿಸುವ ಕಾರ್ಯ ಆರಂಭವಾಗಿದೆ. ಕೊರೊನಾ ಸೋಂಕಿತರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದ ಕಲಬುರಗಿ ಜಿಲ್ಲೆ ಈಗ ಸರ್ಕಾರ ಹಾಗೂ ಜಿಲ್ಲಾಡಳಿತದ ಶ್ರಮದಿಂದ 27ನೇ ಸ್ಥಾನಕ್ಕಿಳಿದಿದೆ ಎಂದು ಸಚಿವರು ಹೇಳಿದರು.