ಮೈಸೂರು:ಆನೆ ದಂತ ಹಾಗೂ ಗಂಧದ ಮರದ ತುಂಡುಗಳನ್ನು ಅಕ್ರಮವಾಗಿ ಸಾಗಿಸುತ್ತಿರುವ ಬಗ್ಗೆ ಮಾಹಿತಿ ಪಡೆದುಕೊಂಡ ವಿಶೇಷ ಹುಲಿ ಸಂರಕ್ಷಣಾ ದಳ (STPF) ಮೈಸೂರು ಜಿಲ್ಲೆಯ ಎರಡು ತಾಲೂಕುಗಳಲ್ಲಿ ಪ್ರತ್ಯೇಕವಾಗಿ ದಾಳಿ ನಡೆಸಿದೆ.
ಮೊದಲಿಗೆ ಎಚ್.ಡಿ.ಕೋಟೆ ತಾಲೂಕಿನ ಕೈಲಾಸಪುರ ಗೇಟ್ ಬಳಿ ಆಕ್ರಮವಾಗಿ ಆನೆ ದಂತಗಳ ಸಾಗಣೆ ಮತ್ತು ಮಾರಾಟ ಮಾಡಲು ಯತ್ನಿಸಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ಆನೆ ದಂತಗಳು ಸೇರಿದಂತೆ ಕಾರು ಹಾಗೂ ಆಟೋಗಳನ್ನು ವಶಪಡಿಸಿಕೊಳ್ಳಲಾಗಿದೆ.