ಕರ್ನಾಟಕ

karnataka

ETV Bharat / state

ಆಸ್ತಿ ವಿವಾದ ಬಗೆಹರಿಸುವುದಾಗಿ ಯುವತಿ ಮೇಲೆ ಸಬ್ ಇನ್ಸ್‌ಪೆಕ್ಟರ್ ಅತ್ಯಾಚಾರ - ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಪರಿಚಯವಾಗಿದ್ದ ಯುವತಿಯನ್ನ ಮದುವೆಯಾಗುವುದಾಗಿ ನಂಬಿಸಿ, ದೈಹಿಕವಾಗಿ ಬಳಸಿಕೊಂಡು ವಂಚಿಸಿರುವ ಸಂಬಂಧ ಸಬ್ ಇನ್ಸ್‌ಪೆಕ್ಟರ್ ವಿರುದ್ಧ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದೂರು ದಾಖಲಾದಾಗಿನಿಂದ ಲೋಕೇಶ್ ಎಸ್ಕೇಪ್ ಆಗಿದ್ದಾರೆ.

Rape
Rape

By

Published : Jul 26, 2021, 11:43 AM IST

ಮೈಸೂರು:ಹಾರಂಗಿ ಜಲಾಶಯದ ಗೆಸ್ಟ್ ಹೌಸ್‌ನಲ್ಲಿ ರೌಡಿಶೀಟರ್ ಹಾಗೂ ಸ್ನೇಹಿತರೊಡನೆ ಪಾರ್ಟಿ ಮಾಡಿ ಅಮಾನತು ಶಿಕ್ಷೆಗೊಳಗಾಗಿದ್ದ ಸಬ್ ಇನ್ಸ್‌ಪೆಕ್ಟರ್ ಪಿ.ಲೋಕೇಶ್ ಮೇಲೆ ಇದೀಗ ಅತ್ಯಾಚಾರದ ಆರೋಪ ಕೇಳಿ ಬಂದಿದೆ.

ಪರಿಚಯವಾಗಿದ್ದ ಯುವತಿಯನ್ನ ಮದುವೆಯಾಗುವುದಾಗಿ ನಂಬಿಸಿ, ದೈಹಿಕವಾಗಿ ಬಳಸಿಕೊಂಡು ವಂಚಿಸಿರುವ ಸಂಬಂಧ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಬ್ ಇನ್ಸ್‌ಪೆಕ್ಟರ್​ನಿಂದ ಅತ್ಯಾಚಾರ

ಮೈಸೂರಿನ ಗಾಯತ್ರಿಪುರಂ ನಿವಾಸಿಯಾದ ಯುವತಿ, ಲೋಕೇಶ್ ವಿರುದ್ಧ ಜುಲೈ 16ರಂದೇ ಎಫ್​ಐಆರ್ ದಾಖಲಿಸಿದ್ದಾರೆ. ದೂರು ದಾಖಲಾದಾಗಿನಿಂದ ಲೋಕೇಶ್ ಎಸ್ಕೇಪ್ ಆಗಿದ್ದಾರೆ. ಈತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ABOUT THE AUTHOR

...view details