ಮೈಸೂರು:ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ಅವರಿಗೆ ಈ ಬಾರಿ ಮೈಸೂರು ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಿದೆ.
ಕ್ರಾಫರ್ಡ್ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅವರು, ಅ.19ರಂದು ನಡೆಯಲಿರುವ ಮೈಸೂರು ವಿಶ್ವವಿದ್ಯಾಲಯದ 100ನೇ ಘಟಿಕೋತ್ಸವದಲ್ಲಿ ಸುಧಾಮೂರ್ತಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಲಾಗುವುದು ಎಂದರು.
ಸುಧಾಮೂರ್ತಿ ಅವರಿಗೆ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್ ಘಟಿಕೋತ್ಸವ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಲೈವ್ನಲ್ಲಿ 25 ನಿಮಿಷಗಳ ಕಾಲ ಭಾಷಣ ಮಾಡಲಿದ್ದಾರೆ. ರಾಜ್ಯ ಚುನಾವಣಾ ಆಯುಕ್ತ ಸಂಜೀವ್ ಕುಮಾರ್ ಕೂಡಾ ಪಿಹೆಚ್‌ಡಿ ಸ್ವೀಕಾರ ಮಾಡಲಿದ್ದಾರೆ. ಕೊರೊನಾ ಹಿನ್ನೆಲೆ 100 ಜನರಿಗೆ ಮಾತ್ರ ಅವಕಾಶ ನೀಡಲಾಗುವುದು. ಪದವಿ ಪ್ರದಾನ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಬಾಯಿ ರೂಡಾಭಾಯ್ ವಾಲಾ, ಉಪಮುಖ್ಯಮಂತ್ರಿ ಡಾ.ಅಶ್ವತ್ಥ್ ನಾರಾಯಣ್ ಭಾಗಿಯಾಗಲಿದ್ದಾರೆ ಎಂದರು.
ಈ ಬಾರಿ 29,018 ವಿದ್ಯಾರ್ಥಿಗಳಿಗೆ ಪದವಿ, ಸ್ನಾತಕೋತ್ತರ ಪದವಿ ಹಾಗೂ 654 ವಿದ್ಯಾರ್ಥಿಗಳಿಗೆ ಪಿಹೆಚ್‌ಡಿ ಪದವಿ ನೀಡಲಾಗುವುದು. ಸಾಮಾಜಿಕ ಜಾಲತಾಣದ ಮೂಲಕ ಕಾರ್ಯಕ್ರಮದ ಲೈವ್ ವ್ಯವಸ್ಥೆ ಮಾಡಲಾಗಿದ್ದು, ಮೂರು ಭಾಗಗಳಲ್ಲಿ ಎಲ್ಇಡಿ ಸ್ಕ್ರೀನ್ ಮೂಲಕ ಕಾರ್ಯಕ್ರಮ ವೀಕ್ಷಣೆ ಮಾಡಬಹುದಾಗಿದೆ ಎಂದು ಮಾಹಿತಿ ನೀಡಿದರು.