ಮೈಸೂರು:ಮಾಜಿ ಸಚಿವ ಡಾ ಹೆಚ್ ಸಿ ಮಹದೇವಪ್ಪ ಪ್ರತಿನಿಧಿಸುತ್ತಿದ್ದ ತಿ ನರಸೀಪುರ ಮೀಸಲು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ತನಗೆ ಟಿಕೆಟ್ ನೀಡುವಂತೆ ಕೋರಿ ಅವರ ಪುತ್ರ ಸುನೀಲ್ ಬೋಸ್ ಅರ್ಜಿ ಹಾಕಿದ್ದಾರೆ.
ಈ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದ್ಯದ ಮಟ್ಟಿಗೆ ತಿ ನರಸೀಪುರ ಕ್ಷೇತ್ರದಿಂದ ನಾನು ಒಬ್ಬ ಮಾತ್ರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಲು ಅರ್ಜಿ ಹಾಕಿದ್ದೇನೆ. ಹೈಕಮಾಂಡ್ ಅರ್ಜಿ ಹಾಕಲು ಸೂಚನೆ ನೀಡಿತ್ತು. ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿರುವ ನನಗೆ ಅಭೂತಪೂರ್ವ ಬೆಂಬಲ ಸಿಗುತ್ತಿದೆ. ಹೀಗಾಗಿ, ನನ್ನ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.