ಮೈಸೂರು: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 55 ವರ್ಷ ಮೇಲ್ಪಟ್ಟ ಹಾಗೂ ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಸಲಹೆ ನೀಡಿದ್ದಾರೆ.
ಡಿಎಆರ್ ನ ಮೈದಾನದಲ್ಲಿ ಬ್ರೀಫಿಂಗ್ ಸೆಷನ್ ನಡೆಸಿ 55 ವರ್ಷ ಮೇಲ್ಪಟ್ಟ ಮತ್ತು ಇತರೆ ಆರೋಗ್ಯ ಸಮಸ್ಯೆಗಳಿರುವ ಸಶಸ್ತ್ರ ದಳದ ಅಧಿಕಾರಿ ಮತ್ತು ಸಿಬ್ಬಂದಿಗೆ ಕೋವಿಡ್-19 ಗೆ ಸಂಬಂಧಿಸಿದಂತೆ ಜಾಗೃತಿಯಿಂದಿರುವಂತೆ ಸೂಚಿಸಿದರು.