ಮೈಸೂರು: ಕೋವಿಡ್-19 ವಿರುದ್ಧ ಹೋರಾಟ ನಡೆಸಲು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದ ಜನತಾ ಕರ್ಫ್ಯೂಗೆ ಅಭೂತ ಪೂರ್ವ ಬೆಂಬಲ ಸಿಕ್ಕಿದ್ದು, ಸುತ್ತೂರು ಮಠದ ಪೀಠಾಧಿಪತಿ ಶ್ರೀ ಶಿವರಾತ್ರೀಶ್ವರ ಸ್ವಾಮೀಜಿಯವರು ಅಭಿನಂದನೆ ಸಲ್ಲಿಸಿದರು.
ಜನತಾ ಕರ್ಫ್ಯೂಗೆ ಬೆಂಬಲ: ಸುತ್ತೂರು ಶ್ರೀಗಳಿಂದ ಅಭಿನಂದನೆ - Mysore corona '
ಕೋವಿಡ್-19 ವಿರುದ್ಧ ಹೋರಾಟ ನಡೆಸುವ ಜನತಾ ಕರ್ಫ್ಯೂಗೆ ಅಭೂತ ಪೂರ್ವ ಬೆಂಬಲ ಸಿಕ್ಕಿದ್ದು, ಸುತ್ತೂರು ಮಠದ ಪೀಠಾಧಿಪತಿ ಶ್ರೀ ಶಿವರಾತ್ರೀಶ್ವರ ಸ್ವಾಮೀಜಿಯವರು ಅಭಿನಂದನೆ ಸಲ್ಲಿಸಿದರು.
ಜನತಾ ಕಪ್ಯೂ೯ ಬೆಂಬಲ
ಸುತ್ತೂರು ಶ್ರೀ ಅವರ ನೇತೃತ್ವದಲ್ಲಿ ಚಾಮುಂಡಿ ಬೆಟ್ಟದ ತಪ್ಪಿನಲ್ಲಿರುವ ಸುತ್ತೂರು ಶಾಖಾ ಮಠದ ಮುಂಭಾಗ ಚಪ್ಪಾಳೆ ಹೊಡೆದರು. ನಂತರ ಕೆ.ಆರ್.ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಅವರು ಖಾಸಗಿ ಸಂಸ್ಥೆ ಮುಂಭಾಗ ಚಪ್ಪಾಳೆ ತಟ್ಟಿ ಅಭಿನಂದಿಸಿ ಮಾಧ್ಯಮಗಳೊಂದಿಗೆ ಮಾತನಾಡಿದರು.
ಅಷ್ಟೇ ಅಲ್ಲದೆ, ಸಂಜೆ 5ರ ವೇಳೆಯಲ್ಲಿ ಮೈಸೂರಿನ ಸಾರ್ವಜನಿಕರು ಚಪ್ಪಾಳೆ ತಟ್ಟಿ ಕೊರೊನಾ ವಿರುದ್ಧ ಹಗಲಿರುಳು ಹೋರಾಟ ಮಾಡುತ್ತಿರುವವರಿಗೆ ಅಭಿನಂದನೆ ಸಲ್ಲಿಸಿದರು.