ಕರ್ನಾಟಕ

karnataka

ETV Bharat / state

ಅಯೋಧ್ಯಾ ತೀರ್ಪು: ಎರಡೂ ಸಮುದಾಯಗಳು ಸೌಹಾರ್ದತೆಯಿಂದಿರಲು ಕರೆ ನೀಡಿದ ಸುತ್ತೂರು ಶ್ರೀ - Suttur sree Release Publication about Ayodhya issue

ರಾಮಜನ್ಮಭೂಮಿ ಹಾಗೂ ಬಾಬರಿ ಮಸೀದಿ ವಿವಾದದ ಸರ್ವೋಚ್ಚ ನ್ಯಾಯಾಲಯದ ತೀರ್ಪು ಇಂದು ಪ್ರಕಟವಾಗಲಿದ್ದು, ಯಾವುದೇ ತೀರ್ಮಾನ ನೀಡಿದರೂ ಎರಡು ಸಮುದಾಯದವರು ಅದನ್ನು ಅತ್ಯಂತ ಗೌರವದಿಂದ ಸ್ವೀಕರಿಸಿಬೇಕು. ಯಾವುದೇ ಸಮುದಾಯದ ಭಾವನೆಗಳಿಗೆ ನೋವಾಗದಂತೆ ನಡೆದುಕೊಳ್ಳಬೇಕಾದದ್ದು ಅಗತ್ಯ ಎಂದು ಸುತ್ತೂರು ಶ್ರೀಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುತ್ತೂರು ಮಠದ ಪೀಠಾಧಿಪತಿ ಡಾ. ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರು ಪ್ರಕಟಣೆ

By

Published : Nov 9, 2019, 9:46 AM IST

ಮೈಸೂರು: ಭಾರತದ ಕಾನೂನು ಇತಿಹಾಸದಲ್ಲಿಯೇ ಅತ್ಯಂತ ಸುದೀರ್ಫ ಕಾಲ ರಾಮಜನ್ಮಭೂಮಿ ಹಾಗೂ ಬಾಬರಿ ಮಸೀದಿ ವಿವಾದದ ವಿಚಾರಣೆ ನಡೆದಿದೆ. ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳು ಇದೇ ತಿಂಗಳ 17 ರಂದು ನಿವೃತ್ತಿ ಹೊಂದಲಿದ್ದು, ಅದಕ್ಕೂ ಮುಂಚೆ ಯಾವ ಕ್ಷಣದಲ್ಲಾದರೂ ತೀರ್ಪು ಪ್ರಕಟವಾಗಬಹುದೆಂದು ನಿರೀಕ್ಷಿಸಲಾಗಿದೆ.

ಸುತ್ತೂರು ಮಠದ ಪೀಠಾಧಿಪತಿ ಡಾ. ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರು ಪ್ರಕಟಣೆ

ಕಗ್ಗಂಟಾಗಿದ್ದ ಈ ವಿವಾದವನ್ನು ನ್ಯಾಯಾಲಯದ ಮೂಲಕವೇ ಬಗೆಹರಿಸಿಕೊಳ್ಳಲು ಎರಡು ಸಮುದಾಯಳು ನಿರ್ಧರಿಸಿ ಸುಪ್ರೀಂ ಮೆಟ್ಟಿಲೇರಿದ್ದರು. ಈ ಹಿನ್ನೆಲೆಯಲ್ಲಿ ಸರ್ವೋಚ್ಚ ನ್ಯಾಯಾಲಯದ ಯಾವುದೇ ತೀರ್ಮಾನ ನೀಡಿದರೂ ಎರಡು ಸಮುದಾಯದವರು ಅದನ್ನು ಅತ್ಯಂತ ಗೌರವದಿಂದ ಸ್ವೀಕರಿಸಿಬೇಕು. ವಿಜಯೋತ್ಸವ ಆಚರಿಸುವುದು ಅಥವಾ ಯಾವುದೇ ರೀತಿಯ ಪ್ರಚೋದನಕಾರಿ ಪ್ರತಿಕ್ರಿಯೆಗಳನ್ನು ನೀಡಿ ಮತ್ತೊಂದು ಸಮುದಾಯದ ಭಾವನೆಗಳಿಗೆ ನೋವಾಗದಂತೆ ನಡೆದುಕೊಳ್ಳಬೇಕಾದದ್ದು ಅಗತ್ಯ. ಎರಡೂ ಸಮುದಾಯದವರು ಪರಸ್ವರ ಪ್ರೀತಿ, ಸೌಹಾರ್ದತೆಯಿಂದಿರಬೇಕು ಎಂದು ಕರೆ ನೀಡಿದ್ದಾರೆ.

ಎಲ್ಲೆಡೆಯೂ ಶಾಂತಿ-ಸೌಹಾರ್ದತೆಯ ಕಂಪು ಹರಡಿ ದೇಶದ ಸಮಗ್ರತೆಯನ್ನು ಕಾಪಾಡಬೇಕಾದದ್ದು ಎಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಸುತ್ತೂರು ಮಠದ ಪೀಠಾಧಿಪತಿ ಡಾ. ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details