ಮೈಸೂರು: ನೀರಾವರಿ ನಿಗಮ ನಿಯಮಿತ ವತಿಯಿಂದ ತಾರಕ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ, ತಾರಕ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಗರಿಷ್ಠ ಮಟ್ಟ ತಲುಪುವ ಹಂತದಲ್ಲಿ ಇರುವುದರಿಂದ, ಜಲಾಶಯದಿಂದ ನದಿಗೆ ಯಾವುದೇ ಕ್ಷಣದಲ್ಲಾದರೂ ನೀರು ಹೊರ ಬಿಡಲಾಗುವುದು.
ಪ್ರವಾಹ ಭೀತಿ ಹಿನ್ನೆಲೆಯಲ್ಲಿ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ - ಮೈಸೂರಿನ ತಾರಕ ನದಿ ಪ್ರವಾಹ ಭೀತಿ
ತಾರಕ ಜಲಾಶಯ ಭರ್ತಿಯಾಗಿದ್ದು, ಪ್ರವಾಹ ಭೀತಿ ಹಿನ್ನೆಲೆಯಲ್ಲಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ತಾರಕ ನದಿ ದಡದಲ್ಲಿ ವಾಸಿಸುತ್ತಿರುವ ಜನರಿಗೆ ನಾಲಾ ಉಪ ವಿಭಾಗದ ಇಂಜಿನಿಯರ್ ತಿಳಿಸಿದ್ದಾರೆ.
ತಾರಕ ನದಿ
ಈ ಹಿನ್ನಲೆಯಲ್ಲಿ ತಾರಕ ನದಿಯ ದಂಡೆಯಲ್ಲಿ ವಾಸಿಸುತ್ತಿರುವವರು, ಸಾರ್ವಜನಿಕರು ಹಾಗೂ ನದಿ ಪಾತ್ರದ ತಗ್ಗು ಪ್ರದೇಶದಲ್ಲಿ ಇರುವವರು ತಮ್ಮ ಆಸ್ತಿ ಪಾಸ್ತಿ, ಜನ ಜಾನುವಾರು ರಕ್ಷಣೆಗೆ ಮುನ್ನೆಚ್ಚರಿಕೆ ವಹಿಸಿ, ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಹೆಚ್.ಡಿ.ಕೋಟೆಯ ತಾರಕ ನಾಲಾ ಉಪ-ವಿಭಾಗದ ಕಾವೇರಿ ನೀರಾವರಿ ನಿಗಮ ನಿಯಮಿತ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಎಂ.ಸಿ.ರಾಮೇಗೌಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.