ಮೈಸೂರು: ಟಿಪ್ಪು ಸುಲ್ತಾನ್ ಕೊಡುಗೆ ಮುಂದೆ, ಸಂಸದ ಪ್ರತಾಪಸಿಂಹರ ಕೊಡುಗೆ ಶೂನ್ಯ, ಇತಿಹಾಸ ತಿಳಿದು ಮಾತನಾಡಲಿ ಎಂದು ಶಾಸಕ ತನ್ವೀರ್ ಸೇಠ್ ಸಂಸದ ಪ್ರತಾಪ್ ಸಿಂಹ ವಿರುದ್ಧ ಕಿಡಿಕಾರಿದರು.
ಟಿಪ್ಪು ಎಕ್ಸ್ಪ್ರೆಸ್ ಹೆಸರನ್ನ ಒಡೆಯರ್ ಎಕ್ಸ್ಪ್ರೆಸ್ ಎಂದು ನಾನು ಉದ್ದೇಶ ಪೂರ್ವಕವಾಗಿಯೇ ಬದಲಾಯಿಸಿದ್ದೇನೆ ಎಂಬ ಸಂಸದ ಪ್ರತಾಪಸಿಂಹ ಹೇಳಿಕೆಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ತನ್ವೀರ್ ಸೇಠ್, ಯಾರು ಕೊಡುಗೆ ಏನಿದೆ ಅಂತ ನಾನು ಚರ್ಚೆಗೆ ಹೋಗಲ್ಲ. ಟಿಪ್ಪು ಸುಲ್ತಾನ್ ಮೈಸೂರು ಸಾಮ್ರಾಜ್ಯಕ್ಕೆ ರಕ್ಷಣೆ ಕೊಟ್ಟಿದ್ದಾರೆ ಎಂಬ ಕೀರ್ತಿ ಇದೆ. ಮಹಾರಾಜರ ನಿಧನದ ನಂತರ 18 ವರ್ಷಗಳ ಕಾಲ ದಸರಾ ನಡೆಸಿರುವ ಇತಿಹಾಸ ಇದೆ ಎಂದು ಹೇಳಿದರು.