ಕರ್ನಾಟಕ

karnataka

ETV Bharat / state

ಎನ್ಆರ್ ಕ್ಷೇತ್ರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳ: ಸಿಎಂಗೆ ಪತ್ರ ಬರೆದ ತನ್ವೀರ್ ಸೇಠ್ - ಶಾಸಕ‌ ತನ್ವೀರ್ ಸೇಠ್

ಎನ್ಆರ್ ಕ್ಷೇತ್ರದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ವೈದ್ಯರು ಹಾಗೂ ವೆಂಟಿಲೇಟರ್​ಗಳ ಸಂಖ್ಯೆ ಹೆಚ್ಚಳ ಮಾಡುವಂತೆ ಸಿಎಂಗೆ ಪತ್ರದ ಮೂಲಕ ಶಾಸಕ‌ ತನ್ವೀರ್ ಸೇಠ್ ಮನವಿ ಮಾಡಿದ್ದಾರೆ.

ತನ್ವೀರ್ ಸೇಠ್
ತನ್ವೀರ್ ಸೇಠ್

By

Published : Aug 7, 2020, 7:11 PM IST

ಮೈಸೂರು: ಎನ್ಆರ್ ಕ್ಷೇತ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಶಾಸಕ‌ ತನ್ವೀರ್ ಸೇಠ್ ಪತ್ರ ಬರೆದಿದ್ದಾರೆ.

ಎನ್ಆರ್ ಕ್ಷೇತ್ರದ ಸಮಸ್ಯೆ ಕುರಿತು ಸಿಎಂಗೆ ಪತ್ರ ಬರೆದ ತನ್ವೀರ್ ಸೇಠ್

ಈಗಿರುವ ವೈದ್ಯಕೀಯ ಸಿಬ್ಬಂದಿಗೆ ಕಾರ್ಯ ಒತ್ತಡ ಹೆಚ್ಚಾಗುತ್ತಿದ್ದು, ಮೈಸೂರು ಜಿಲ್ಲೆಗೆ ಸುಮಾರು 300 ವೆಂಟಿಲೇಟರ್​ಗಳ ಅಗತ್ಯವಿದೆ. ರೋಗಿಗಳಿಗೆ ಸರಿಯಾದ ರೀತಿಯಲ್ಲಿ ಚಿಕಿತ್ಸೆ ಸಿಗದೆ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಕೊರೊನಾ ಸಂದರ್ಭದಲ್ಲಿ ಬಹುತೇಕ ವೈದ್ಯರು ಕಾರ್ಯ ನಿರ್ವಹಿಸಲು ಅಶಕ್ತರಾಗುತ್ತಿದ್ದಾರೆ. ಸರ್ಕಾರದ ಮಾರ್ಗಸೂಚಿ ಪ್ರಕಾರ ಕಾರ್ಯ ನಿರ್ವಹಿಸಲು ಆಗುತ್ತಿಲ್ಲ. ಹಾಗಾಗಿ ಮಾರ್ಗಸೂಚಿಯಲ್ಲಿ ವಯೋಮಿತಿ ಷರತ್ತುಗಳ ಸಡಿಲಿಕೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಸಿಎಂಗೆ ಪತ್ರ ಬರೆದ ತನ್ವೀರ್ ಸೇಠ್

ಇನ್ನು ಸರ್ಕಾರಿ ಮತ್ತು ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಮೆಡಿಕಲ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ತೆಗೆದುಕೊಳ್ಳಬೇಕು. ಕೊರೊನಾ ನಿಯಂತ್ರಣಕ್ಕೆ ಬರುವವರೆಗೂ ಖಾಸಗಿ ಆಸ್ಪತ್ರೆಗಳನ್ನು ಸರ್ಕಾರದ ಸುಪರ್ದಿಗೆ ತೆಗೆದುಕೊಂಡು ರೋಗಿಗಳಿಗೆ ಚಿಕಿತ್ಸೆ ನೀಡಬೇಕು. ಎನ್ಆರ್ ಕ್ಷೇತ್ರಕ್ಕೆ ಮತ್ತಷ್ಟು ವೈದ್ಯರನ್ನು ಒದಗಿಸಬೇಕು ಹಾಗೂ ಪ್ಯಾರಾಮೆಡಿಕಲ್ ಸಿಬ್ಬಂದಿ ಸಂಖ್ಯೆ ಹೆಚ್ಚಿಸುವಂತೆ ಪತ್ರದ ಮೂಲಕ‌‌ ಸಿಎಂಗೆ ಮನವಿ ಮಾಡಿದ್ದಾರೆ

ABOUT THE AUTHOR

...view details