ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅಧ್ಯಕ್ಷತೆಯಲ್ಲಿ ನಾಡಹಬ್ಬ ದಸರಾ ಮಹೋತ್ಸವ-2022ರ ಪೂರ್ವಭಾವಿ ಸಭೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿಂದು ನಡೆಯಿತು. ಈ ಸಭೆಯಲ್ಲಿ ದಸರಾ ಕಾರ್ಯಕ್ರಮಗಳ ಆಯೋಜನೆಯ ಸಂಬಂಧ ಅಧಿಕಾರಿಗಳಿಂದ ಸಚಿವರು ಮಾಹಿತಿ ಪಡೆದರು. ಹೊರ ರಾಜ್ಯಗಳಿಂದ ಆಗಮಿಸುವ ಪ್ರವಾಸಿ ವಾಹನಗಳಿಗೆ ತೆರಿಗೆ ವಿನಾಯಿತಿ ನೀಡುವ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯ ಹೆಸರನ್ನು ಸೇರ್ಪಡೆ ಮಾಡುವಂತೆಯೂ ಸೂಚಿಸಿದರು.
ಮೈಸೂರಿಗೆ ಆಗಮಿಸುವ ಪ್ರವಾಸಿಗರು ಕೆಆರ್ಎಸ್, ಶ್ರೀರಂಗಪಟ್ಟಣ ಸೇರಿದಂತೆ ಮಂಡ್ಯ ಜಿಲ್ಲೆಯ ನಾನಾ ಪ್ರವಾಸಿ ಸ್ಥಳಗಳ ವೀಕ್ಷಣೆಗೆ ತೆರಳುವ ಸಂದರ್ಭದಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಹೀಗಾಗಿ ಅಂತಾರಾಜ್ಯ ವಾಹನಗಳಿಗೆ ತೆರಿಗೆ ವಿನಾಯಿತಿ ನೀಡುವಾಗ ಮಂಡ್ಯ ಜಿಲ್ಲೆಯ ಹೆಸರು ಕೂಡ ಸೇರ್ಪಡೆ ಮಾಡಬೇಕು ಎಂದರು.