ಕರ್ನಾಟಕ

karnataka

ETV Bharat / state

ಮೈಸೂರು: ಸಾಲಭಾದೆಯಿಂದ ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕ - ಸಾಲಭಾದೆ

ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರಾಗಿದ್ದ ಶಂಭುಲಿಂಗ ಎಂಬುವವರು ಸಾಲಭಾದೆ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

Teacher committed suicide
ಸಾಲಭಾದೆಯಿಂದ ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕ

By

Published : Nov 4, 2022, 1:58 PM IST

Updated : Nov 4, 2022, 2:42 PM IST

ಮೈಸೂರು:ಸಾಲಭಾದೆಯಿಂದ ಬೇಸತ್ತ ಶಿಕ್ಷಕರೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ಪಟ್ಟಣ ವ್ಯಾಪ್ತಿಯಲ್ಲಿ ನಡೆದಿದೆ. ಶಂಭುಲಿಂಗ (47) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ.

ನಂಜನಗೂಡು ಪಟ್ಟಣದ ದೇವಿರಮ್ಮನಹಳ್ಳಿ ಬಳಿಯ ರಾಮಸ್ವಾಮಿ ಲೇಔಟ್ ನಿವಾಸಿಯಾಗಿರುವ ಇವರು, ಪಟ್ಟಣದ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರು. ಎಂದಿನಂತೆ ಕೆಲಸ ಮುಗಿಸಿಕೊಂಡು ಗುರುವಾರ ಸಂಜೆ ಮನೆಗೆ ಬಂದಿದ್ದ ಶಿಕ್ಷಕ ಶಂಭುಲಿಂಗ ಸ್ವಾಮಿ ಸಂಜೆ ಮನೆಯಿಂದ ಹೊರ ಹೋಗಿದ್ದಾರೆ. ರಾತ್ರಿಯಾದರೂ ಮನೆಗೆ ಬಾರದ ಹಿನ್ನೆಲೆ ಮನೆಯವರು ಹುಡುಕಾಟ ನಡೆಸಿದ್ದಾರೆ.

ಸಾಲಭಾದೆಯಿಂದ ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕ

ಮನೆಯ ಕಾರ್ ಶೆಡ್ ಬಳಿ ನೋಡಿದಾಗ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಿದ್ರೂ, ಅಷ್ಟರಲ್ಲಾಗಲೇ ಮೃತಪಟ್ಟಿದ್ದರು. ಶಂಭುಲಿಂಗ ಸ್ವಾಮಿ ಸ್ಥಿತಿವಂತರಾಗಿದ್ದರೂ ಆತ್ಮಹತ್ಯೆಗೆ ಶರಣಾಗಿರುವುದು ಹಲವಾರು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.

ಇದನ್ನೂ ಓದಿ:ಹೃದಯಾಘಾತದಿಂದ ಲೇಖಕ ಕುಕ್ಕರಹಳ್ಳಿ ಬಸವರಾಜು ನಿಧನ

ಮೃತ ಶಿಕ್ಷಕ ಕೋಟ್ಯಂತರ ರೂಪಾಯಿ ಚೀಟಿ ಹಾಗೂ ಹಣಕಾಸು ವ್ಯವಹಾರ ನಡೆಸುತ್ತಿದ್ದ ಕಾರಣ, ತಿಂಗಳ ಹಿಂದೆ ಅವರ ಮನೆಯಲ್ಲಿ ಕಳ್ಳತನವಾಗಿತ್ತು. ಈ ದರೋಡೆ ಪ್ರಕರಣ ಹಾಗೂ ಶಿಕ್ಷಕರ ಆತ್ಮಹತ್ಯೆ ಈಗ ತೀವ್ರ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Last Updated : Nov 4, 2022, 2:42 PM IST

ABOUT THE AUTHOR

...view details