ಕರ್ನಾಟಕ

karnataka

ETV Bharat / state

ಮೈಸೂರಿನಲ್ಲಿ ದೇಗುಲಗಳ ತೆರವಿಗೆ ತಾತ್ಕಾಲಿಕ ವಿರಾಮ.. - ದೇಗುಲಗಳ ತೆರವಿಗೆ ತಾತ್ಕಾಲಿಕ ವಿರಾಮ

2009ರಲ್ಲಿ ಪಟ್ಟಿ ಮಾಡಿರುವ ರೀತಿಯಲ್ಲಿ ಮೈಸೂರು ನಗರದಲ್ಲಿ 96 ಧಾರ್ಮಿಕ ಕಟ್ಟಡಗಳಿದ್ದು, ಅವುಗಳನ್ನು ತೆರವುಗೊಳಿಸಲು ಜಿಲ್ಲಾಡಳಿತ ಕಾರ್ಯಾಚರಣೆ ಆರಂಭಿಸಿತ್ತು. ಇದರ ಜೊತೆಗೆ ಮೈಸೂರು ಜಿಲ್ಲೆಯಲ್ಲಿರುವ ಧಾರ್ಮಿಕ ಕಟ್ಟಡಗಳನ್ನು ನೆಲಸಮಗೊಳಿಸಲು ಜಿಲ್ಲಾಡಳಿತ ತಾಲೂಕು ತಹಶಿಲ್ದಾರ್ ನೇತೃತ್ವದಲ್ಲಿ ಕಾರ್ಯಾಚರಣೆ ಆರಂಭಿಸಿತ್ತು. ಇದೀಗ ವಿರೋಧದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಾರ್ವಜನಿಕ ಸ್ಥಳಗಳಲ್ಲಿ ನಿರ್ಮಿಸಿರುವ ಧಾರ್ಮಿಕ ಕಟ್ಟಡಗಳ ತೆರವಿಗೆ ತಾತ್ಕಾಲಿಕವಾಗಿ ತಡೆ ನೀಡಿದೆ.

mysore
ದೇಗುಲಗಳ ತೆರವಿಗೆ ತಾತ್ಕಾಲಿಕ ವಿರಾಮ

By

Published : Sep 14, 2021, 11:10 AM IST

ಮೈಸೂರು: ಜಿಲ್ಲಾಡಳಿತದಿಂದ ದೇಗುಲ ತೆರವಿಗೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ದೇಗುಲ ತೆರವಿಗೆ ವಿರಾಮ ನೀಡಲಾಗಿದೆ. ನಂಜನಗೂಡು ತಾಲೂಕಿನ ಹುಚ್ಚಗಣಿ ಗ್ರಾಮದ ದೇಗುಲ ತೆರವಿನ ನಂತರ ಉಂಟಾದ ವಿರೋಧದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಾರ್ವಜನಿಕ ಸ್ಥಳಗಳಲ್ಲಿ ನಿರ್ಮಿಸಿರುವ ಧಾರ್ಮಿಕ ಕಟ್ಟಡಗಳ ತೆರವಿಗೆ ತಾತ್ಕಾಲಿಕವಾಗಿ ತಡೆ ನೀಡಿದೆ.

2009ರಲ್ಲಿ ಪಟ್ಟಿ ಮಾಡಿರುವ ರೀತಿಯಲ್ಲಿ ಮೈಸೂರು ನಗರದಲ್ಲಿ 96 ಧಾರ್ಮಿಕ ಕಟ್ಟಡಗಳಿದ್ದು, ಅವುಗಳನ್ನು ತೆರವುಗೊಳಿಸಲು ಜಿಲ್ಲಾಡಳಿತ ಕಾರ್ಯಾಚರಣೆ ಆರಂಭಿಸಿತ್ತು. ಇದರ ಜೊತೆಗೆ ಮೈಸೂರು ಜಿಲ್ಲೆಯಲ್ಲಿರುವ ಧಾರ್ಮಿಕ ಕಟ್ಟಡಗಳನ್ನು ನೆಲಸಮಗೊಳಿಸಲು ಜಿಲ್ಲಾಡಳಿತ ತಾಲೂಕು ತಹಶೀಲ್ದಾರ್ ನೇತೃತ್ವದಲ್ಲಿ ಕಾರ್ಯಾಚರಣೆ ಆರಂಭಿಸಿತ್ತು.

ಸಂಸದರ ಆಕ್ರೋಶ

ಇದರ ನಿಮಿತ್ತ ನಂಜನಗೂಡು ತಾಲೂಕಿನ ಹುಚ್ಚಗಣಿ ಗ್ರಾಮದ ಶಕ್ತಿ ದೇವತೆ ಮಹದೇವಮ್ಮ ದೇವಾಲಯವನ್ನು ನೆಲಸಮಗೊಳಿಸಿತ್ತು. ಇದಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವಿಟರ್​ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಜೊತೆಗೆ ಸಂಸದ ಪ್ರತಾಪ್ ಸಿಂಹ ಹಾಗೂ ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಮಧ್ಯೆ ಜಿಲ್ಲಾಡಳಿತ ಮೈಸೂರು ನಗರದ 96 ಧಾರ್ಮಿಕ ಕಟ್ಟಡಗಳನ್ನು ನೆಲಸಮಗೊಳಿಸಲು ಪಟ್ಟಿ ಬಿಡುಗಡೆ ಮಾಡಿದ್ದು, ಅದರಲ್ಲಿ ಅಗ್ರಹಾರದ 101 ಗಣಪತಿ ದೇವಾಲಯವನ್ನು ತೆರವುಗೊಳಿಸಲು ದಿನಾಂಕ ನಿಗದಿಪಡಿಸಿತ್ತು.

ಆದರೆ 101 ಗಣಪತಿ ದೇವಾಲಯ ತೆರವಿಗೆ ವಿರೋಧ ವ್ಯಕ್ತವಾದ ಹಾಗೂ ಸಾರ್ವಜನಿಕರ ಆಕ್ರೋಶದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಜಿಲ್ಲಾಡಳಿತ ದೇಗುಲ ತೆರವಿಗೆ ತಡೆ ನೀಡಿದೆ. ಇದರ ಜೊತೆಗೆ 2009 ರಲ್ಲಿ ರೂಪಿಸಿರುವ ಪಟ್ಟಿಯಂತೆ ನಗರದಲ್ಲಿರುವ 96 ಧಾರ್ಮಿಕ ಕಟ್ಟಡಗಳನ್ನು ಪಾಲಿಕೆಯ 9 ಕಚೇರಿಗಳಲ್ಲಿ ಮರು ಸಮೀಕ್ಷೆ ಮಾಡುವ ಕೆಲಸವನ್ನು ಮಾಡಲು ಪಾಲಿಕೆ ನಿರ್ಧರಿಸಿದೆ.

ದೇಗುಲ ತೆರವಿಗೆ ತಡೆಗೆ ಕಾರಣವೇನು?
ಧಾರ್ಮಿಕ ಕಟ್ಟಡಗಳನ್ನು ನ್ಯಾಯಾಲಯದ ನಿರ್ದೇಶನದಂತೆ ಒಡೆದು ಹಾಕಲು ಕಾರ್ಯಾಚರಣೆ ಆರಂಭಿಸಿದ ಹಿನ್ನೆಲೆಯಲ್ಲಿ ಆಡಳಿತ ಪಕ್ಷದ ಸಂಸದರು, ಶಾಸಕರು, ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದರು.

ಅಷ್ಟೇ ಅಲ್ಲ ದಸರಾ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಮುಖವಾಗಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳು ಬರುತ್ತಿರುವ ನಿಮಿತ್ತ ಧಾರ್ಮಿಕ ಕಟ್ಟಡಗಳ ತೆರವನ್ನು ತಾತ್ಕಾಲಿಕವಾಗಿ ನಿಲ್ಲಿಸುವಂತೆ ಜಿಲ್ಲಾಡಳಿತಕ್ಕೆ ಸರ್ಕಾರ ಮೌಖಿಕ ಆದೇಶ ನೀಡಿದೆ. ಈ ಪರಿಣಾಮ ಕಾರ್ಯಾಚರಣೆಯನ್ನು ಜಿಲ್ಲಾಡಳಿತ ನಿಲ್ಲಿಸಿದೆ ಎನ್ನಲಾಗಿದೆ.

ಕಳೆದ ಹತ್ತು ವರ್ಷಗಳ ಹಿಂದೆ ಅಂದಿನ ಜಿಲ್ಲಾಧಿಕಾರಿಯಾಗಿದ್ದ ಹರ್ಷಗುಪ್ತ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿಗೆ ಮುಂದಾಗಿದ್ದಾಗ ಇದೇ ರೀತಿ ವಿರೋಧ ವ್ಯಕ್ತವಾಗಿತ್ತು.

ABOUT THE AUTHOR

...view details