ಕರ್ನಾಟಕ

karnataka

ETV Bharat / state

ದೇವಸ್ಥಾನಗಳನ್ನು ಮತ್ತೆ ಬಂದ್​​​​ ಮಾಡುವುದಿಲ್ಲ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ - ಬೇರೆಯವರಿಗೆ ಪೂಜೆ ಪ್ರಕ್ರಿಯೆಗಳಿಗೆ ಅವಕಾಶ ಇಲ್ಲ

ಸಾಮಾಜಿಕ ಅಂತರ ಕಾಯ್ದುಕೊಂಡು ದೇವರ ದರ್ಶನಕ್ಕೆ ಅವಕಾಶ ಕೊಟ್ಟಿದ್ದೇವೆ. ಸದ್ಯಕ್ಕೆ ದೇವಸ್ಥಾನಗಳನ್ನು ಬಂದ್ ಮಾಡುವ ಯೋಚನೆ ಇಲ್ಲ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.

temples
ಕೋಟಾ ಶ್ರೀನಿವಾಸ್ ಪೂಜಾರಿ

By

Published : Jun 24, 2020, 5:24 PM IST

ಮೈಸೂರು:ದೇವಸ್ಥಾನಗಳಲ್ಲಿ ಬೇರೆಯವರಿಗೆ ಪೂಜೆ ಪ್ರಕ್ರಿಯೆಗಳಿಗೆ ಅವಕಾಶ ಕೊಟ್ಟಿಲ್ಲ. ಸಾಮಾಜಿಕ ಅಂತರ ಕಾಯ್ದುಕೊಂಡು ದೇವರ ದರ್ಶನಕ್ಕೆ ಅವಕಾಶ ಕೊಟ್ಟಿದ್ದೇವೆ. ಸದ್ಯಕ್ಕೆ ದೇವಸ್ಥಾನಗಳನ್ನು ಬಂದ್ ಮಾಡುವ ಯೋಚನೆ ಇಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸೂಚನೆ ಮೇರೆಗೆ ಮುಂದುವರೆಯಲಿದ್ದೇವೆ ಎಂದು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು.

ಇಂದು ಮೈಸೂರಿನಲ್ಲಿ ಪ್ರಗತಿ ಪರಿಶೀಲನಾ ಸಭೆಗೆ ಆಗಮಿಸಿದ್ದ ಅವರು ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕು ಹೆಚ್ಚಾಗುತ್ತಿದೆ. ಇದರಿಂದ ದೇವಸ್ಥಾನಗಳನ್ನು ಬಂದ್ ಮಾಡಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಇಲ್ಲ ಕೊರೊನಾ ಒಂದು ಹಂತದಲ್ಲಿ ನಿಯಂತ್ರಣಕ್ಕೆ ಬರುತ್ತಿದೆ ಎಂಬ ನಿರೀಕ್ಷೆ ಇತ್ತು. ಆದರೆ ಈಗಿನ ಅಂಕಿ-ಅಂಶಗಳ ಪ್ರಕಾರ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಹಾಗಾಗಿ ದೇವಸ್ಥಾನಗಳಲ್ಲಿ ಬೇರೆಯವರಿಗೆ ಪೂಜೆ ಪ್ರಕ್ರಿಯೆಗಳಿಗೆ ಅವಕಾಶ ಕೊಟ್ಟಿಲ್ಲ. ಸಾಮಾಜಿಕ ಅಂತರ ಕಾಯ್ದುಕೊಂಡು ದೇವರ ದರ್ಶನಕ್ಕೆ ಅವಕಾಶ ಕೊಟ್ಟಿದ್ದೇವೆ ಎಂದರು.

ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಮಂಗಳೂರು ಮತ್ತು ಉಡುಪಿಯಲ್ಲಿ ಸ್ಥಳೀಯರಿಗಿಂತ ಹೊರ ರಾಜ್ಯದಿಂದ ಬಂದವರು, ವಿದೇಶದಿಂದ ಬಂದವರ ಸಂಖ್ಯೆ ಜಾಸ್ತಿ ಇದೆ. ಅವರೆಲ್ಲರನ್ನೂ ಕ್ವಾರಂಟೈನ್ ಮಾಡಲಾಗಿದ್ದು, ಅವರಲ್ಲಿ 1000ಕ್ಕೂ ಹೆಚ್ಚು ಮಂದಿ ಹೊರ ರಾಜ್ಯದಿಂದ ಬಂದವರಾಗಿದ್ದಾರೆ. ಅವರನ್ನು ಕ್ವಾರಂಟೈನ್ ಮಾಡಿದ ನಂತರ ಪ್ರಕರಣಗಳು ಕಡಿಮೆಯಾಗಿವೆ ಎಂದು ತಿಳಿಸಿದರು.

ABOUT THE AUTHOR

...view details