ಮೈಸೂರು: ದಸರಾ ಮಹೋತ್ಸವದ ಪೂರ್ವಬಾವಿ ಕಾಮಗಾರಿಗಳು ಪ್ರಗತಿಯಲ್ಲಿರುವುದರಿಂದ ಹಾಗೂ ಅರಮನೆ ಆವರಣದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಹಿನ್ನೆಲೆ ಇಂದಿನಿಂದ(ಅ.4) ರಿಂದ 21 ರವರೆಗೆ ಮೈಸೂರು ಅರಮನೆ ಆವರಣದಲ್ಲಿ ನಡೆಯುವ 'ಧ್ವನಿ ಮತ್ತು ಬೆಳಕು' ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ.
ಅರಮನೆಯ ಧ್ವನಿ - ಬೆಳಕು ಕಾರ್ಯಕ್ರಮಗಳು ತಾತ್ಕಾಲಿಕ ರದ್ದು - mysore dasara news
ಕಾಮಗಾರಿಗಳು ಪ್ರಗತಿಯಲ್ಲಿರುವುದರಿಂದ ಇಂದಿನಿಂದ(ಅ.4) ರಿಂದ 21 ರವರೆಗೆ ಮೈಸೂರು ಅರಮನೆ ಆವರಣದಲ್ಲಿ ನಡೆಯುವ 'ಧ್ವನಿ ಮತ್ತು ಬೆಳಕು' ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ.
ಅರಮನೆಯ ಧ್ವನಿ ಮತ್ತು ಬೆಳಕು ಕಾರ್ಯಕ್ರಮಗಳಿಗೆ ತಾತ್ಕಾಲಿಕ ರದ್ದು
ಈ ಸಂಬಂಧ ಮೈಸೂರು ಅರಮನೆ ಮಂಡಳಿಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಅಕ್ಟೋಬರ್ 7ರಂದು ಮೈಸೂರು ದಸರಾ ಉದ್ಘಾಟನೆಯಾಗಲಿದೆ. ಚಾಮುಂಡಿ ಬೆಟ್ಟದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಮೈಸೂರು ದಸರಾವನ್ನು ಉದ್ಘಾಟನೆ ಮಾಡಲಿದ್ದಾರೆ.
ಅಕ್ಟೋಬರ್ 15ರಂದು ಜಂಬೂಸವಾರಿ ನಡೆಯಲಿದ್ದು, ಸಂಜೆ 4.36 ರಿಂದ 5.30ರ ಶುಭ ಮೀನ ಲಗ್ನದಲ್ಲಿ ಪೂಜೆ ನಡೆಯಲಿದೆ.