ಮೈಸೂರು:ಕೇರಳದ ಮೂಲದ ಟೆಕ್ಕಿಯೊಬ್ಬ ಅಂತರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳನ್ನಾಗಿ ಪರಿವರ್ತಿಸಿ ಅಕ್ರಮ ಹಣ ಸಂಪಾದನೆ ಮಾಡುತ್ತಿದ್ದ. ಈ ವ್ಯಕ್ತಿಯನ್ನು ನರಸಿಂಹರಾಜ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ನಗರದ ಹಳೆ ಕೆಸರೆ ಬಳಿಯ ಕಾಮನ ಕೆರೆ ಹುಂಡಿ ರಸ್ತೆಯಲ್ಲಿರುವ ಮನೆಯೊಂದರಲ್ಲಿ ಅನಧಿಕೃತವಾಗಿ ಸಿಮ್ ಬಾಕ್ಸ್, ರೂಟರ್ ಹಾಗೂ ಇತರೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸಿಕೊಂಡು ಅಂತರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಯನ್ನಾಗಿ ಪರಿವರ್ತಿಸಿ ಸರ್ಕಾರಕ್ಕೆ ಹಾಗೂ ಮೊಬೈಲ್ ಸೇವಾ ಸಂಸ್ಥೆಗಳಿಗೆ ವಂಚನೆ ಮಾಡುತ್ತಿದ್ದ.