ಮೈಸೂರು : ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ಹಿರೇಹಳ್ಳಿ ಗ್ರಾಮ ಚಾಮರಾಜನಗರ ಲೋಕಸಭಾ ವ್ಯಾಪ್ತಿಗೆ ಬರುತ್ತದೆ. ಸ್ಥಳೀಯ ಕಾಂಗ್ರೆಸ್ ಶಾಸಕ ಅನಿಲ್ ಚಿಕ್ಕಮಾದು ಈ ಗ್ರಾಮಕ್ಕೆ ಆಗಮಿಸಿ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆಗೆ ಮುಂದದಾಗ ಗ್ರಾಮಸ್ಥರು ಗ್ರಾಮದ ಒಳಗೆ ಚುನಾವಣಾ ಪ್ರಚಾರ ನಡೆಸದಂತೆ ಘೇರಾವ್ ಹಾಕಿದ್ದರು.
ಮತಯಾಚನೆಗೆ ಬಂದಿದ್ದ ಕಾಂಗ್ರೆಸ್ ಶಾಸಕನಿಗೆ ಗ್ರಾಮಸ್ಥರಿಂದ ಘೇರಾವ್ - kannada news
ಚುನಾವಣಾ ಪ್ರಚಾರಕ್ಕೆ ಕಾಂಗ್ರೆಸ್ ಶಾಸಕರಿಗೆ ಗ್ರಾಮಸ್ಥರು ಘೇರಾವ್ ಹಾಕಿ ವಾಪಸ್ ಕಳಿಸಿದ ಘಟನೆ ಹೆಚ್.ಡಿ. ಕೋಟೆ ತಾಲೂಕಿನ ಹಿರೇಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮಸ್ಥರಿಂದ ಕಾಂಗ್ರೆಸ್ ಶಾಸಕ ಅನಿಲ್ ಚಿಕ್ಕಮಾದು ರವರಿಗೆ ಘೇರಾವ್
ನೀವು ಶಾಸಕರಾಗಿ ಒಂದು ವರ್ಷ ಆಗುತ್ತಿದ್ದರೂ ಗ್ರಾಮದ ಕಡೆ ಮುಖ ಮಾಡಿಲ್ಲ. ಇಲ್ಲಿ ರಸ್ತೆ, ಕುಡಿಯುವ ನೀರಿನ ವ್ಯವಸ್ಥೆ ಸರಿಯಿಲ್ಲ. ನೀವು ಗ್ರಾಮದೊಳಗೆ ಬಂದು ಮತ ಕೇಳಬೇಡಿ ಎಂದು ಶಾಸಕರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡರು.
ಇದಕ್ಕೆ ಹೆದರಿದ ಶಾಸಕ ಅನಿಲ್ ಚಿಕ್ಕಮಾದು ಮರಳಿ ತೆರಳಿದರು. ಇದೇ ವೇಳೆ ಗ್ರಾಮದ ಯುವಕರು ಮೋದಿ ಮೋದಿ ಎಂದು ಘೋಷಣೆ ಕೂಗಿದರು.