ಮೈಸೂರು: ಬಿಜೆಪಿಯಿಂದ ದೇಶಕ್ಕೆ ಗಂಡಾಂತರ ಕಾದಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಮೂಲಕ ಸಂವಿಧಾನ ರಕ್ಷಣೆ ಮಾಡಬೇಕಿದೆ ಎಂದು ಮಾಜಿ ಸಚಿವ ಡಾ. ಹೆಚ್. ಸಿ. ಮಹದೇವಪ್ಪ ಹೇಳಿದ್ದಾರೆ.
ಬಿಜೆಪಿಯಿಂದ ಸಂವಿಧಾನಕ್ಕೆ ಗಂಡಾಂತರ ಕಾದಿದೆ: ಡಾ.ಹೆಚ್.ಸಿ.ಮಹದೇವಪ್ಪ - undefined
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಸುವ ಮೂಲಕ ಸಂವಿಧಾನ ರಕ್ಷಣೆ ಮಾಡಬೇಕಿದೆ, ಇಲ್ಲವೆಂದರೆ ಬಿಜೆಪಿಯಿಂದ ದೇಶಕ್ಕೆ ಗಂಡಾಂತರ ಕಟ್ಟಿಟ್ಟಬುತ್ತಿ ಎಂದು ಮಾಜಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
![ಬಿಜೆಪಿಯಿಂದ ಸಂವಿಧಾನಕ್ಕೆ ಗಂಡಾಂತರ ಕಾದಿದೆ: ಡಾ.ಹೆಚ್.ಸಿ.ಮಹದೇವಪ್ಪ](https://etvbharatimages.akamaized.net/etvbharat/images/768-512-2818243-1061-dfaddddd-cf08-48d3-bc6e-5981544a5124.jpg)
ಲೋಕಸಭಾ ಚುನಾವಣೆ ಬಿಜೆಪಿ ಸೋಲಿಸುವ ಮೂಲಕ ಸಂವಿಧಾನ ರಕ್ಷಣೆ ಮಾಡಬೇಕಿದೆ ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ.
ಲೋಕಸಭಾ ಚುನಾವಣೆ ಬಿಜೆಪಿ ಸೋಲಿಸುವ ಮೂಲಕ ಸಂವಿಧಾನ ರಕ್ಷಣೆ ಮಾಡಬೇಕಿದೆ: ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ.
ಕಾಂಗ್ರೆಸ್ ಕಚೇರಿಯಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, 1996ರಲ್ಲಿ ಪ್ರಧಾನಿಯಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಸಂವಿಧಾನದ ಬದಲಾವಣೆಯ ಬಗ್ಗೆ ಪರಾಮರ್ಶೆ ಮಾಡಿಸಿದರು. ಆದರೆ ಅವರಿಂದ ಸಾಧ್ಯವಾಗಿಲ್ಲ. ದೇಶದಲ್ಲಿ ಯಾರೇ ಬಂದರೂ ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳಲು ಸಾಧ್ಯವಿಲ್ಲ ಎಂದರು.
ಚುನಾವಣೆ ಮಹಾಸಂಗ್ರಾಮವಾಗಿದೆ. ಇದರಿಂದ ಮತದಾರರು ಎಚ್ಚೆತ್ತು ಕೋಮುವಾದಿ ಬಿಜೆಪಿಯನ್ನು ದೂರ ಇಡಬೇಕಿದೆ ಎಂದು ಹೇಳಿದರು.