ಮೈಸೂರು: ಎನ್ಆರ್ಸಿ ಹಾಗೂ ಸಿಎಎ ಕಾಯ್ದೆ ಜಾರಿಗೆ ತಂದು ದೇಶದ ಜನರಿಗೆ ಒತ್ತಡ ಹಾಕುವ ಮೂಲಕ ಕೇಂದ್ರ ಸರ್ಕಾರ ಸರ್ವಾಧಿಕಾರಿ ಧೋರಣೆ ತೋರುತ್ತಿದೆ ಎಂದು ಮಾಜಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ಆರೋಪಿಸಿದರು.
ಕೇಂದ್ರ ಸರ್ಕಾರ ದೇಶದಲ್ಲಿ ಸರ್ವಾಧಿಕಾರಿ ಧೋರಣೆ ತೋರುತ್ತಿದೆ: ಹೆಚ್.ಸಿ.ಮಹದೇವಪ್ಪ - mysuru Former Minister Dr HC Mahadevappa
ಸಿಎಎ ಕಾಯ್ದೆ ಜಾರಿಗೆ ತಂದು ದೇಶದ ಜನರಿಗೆ ಒತ್ತಡ ಹಾಕುವ ಮೂಲಕ ಕೇಂದ್ರ ಸರ್ಕಾರ ಸರ್ವಾಧಿಕಾರಿ ಧೋರಣೆ ತೋರುತ್ತಿದೆ ಎಂದು ಮಾಜಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ಆರೋಪಿಸಿದರು.
![ಕೇಂದ್ರ ಸರ್ಕಾರ ದೇಶದಲ್ಲಿ ಸರ್ವಾಧಿಕಾರಿ ಧೋರಣೆ ತೋರುತ್ತಿದೆ: ಹೆಚ್.ಸಿ.ಮಹದೇವಪ್ಪ Mahadevappa](https://etvbharatimages.akamaized.net/etvbharat/prod-images/768-512-5445863-thumbnail-3x2-vidjpg.jpg)
ಡಾ.ಹೆಚ್.ಸಿ.ಮಹದೇವಪ್ಪ
ಮಾಜಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ
ಜಿಲ್ಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆ ಮೂಲಕ ಸಂವಿಧಾನದ ವಿರುದ್ಧವಾಗಿ ಸರ್ಕಾರ ನಡೆದುಕೊಳ್ಳುತ್ತಿದೆ. ಮಂಗಳೂರಿನಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಕಾಂಗ್ರೆಸ್ ಮುಖಂಡರ ಕೈವಾಡವಿಲ್ಲ. ರಾಜ್ಯ ಸರ್ಕಾರ ಇಂತಹ ಆರೋಪಗಳನ್ನು ಮಾಡುವುದನ್ನು ಕೈಬಿಡಬೇಕು ಎಂದರು.ಇನ್ನು ಗಲಭೆಯಿಂದ ಮೃತಪಟ್ಟ ಕುಟುಂಬಗಳಿಗೆ ಸರ್ಕಾರ ಸೂಕ್ತ ಪರಿಹಾರ ಕೊಡಬೇಕು ಹಾಗೂ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದರು.