ಮೈಸೂರು : ಆಕ್ಸಿಜನ್ ಕಿಟ್ ಧರಿಸಿ ಮತಗಟ್ಟೆಗೆ ಬಂದ ಗ್ರಾಪಂ ಸದಸ್ಯರೊಬ್ಬರು ಕುಸಿದು ಬಿದ್ದರೂ ಧೃತಿಗೆಡದೇ ತಮ್ಮ ಹಕ್ಕು ಚಲಾಯಿಸಿರುವ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮ ಪಂಚಾಯಿತಿ ಮತಗಟ್ಟೆಯಲ್ಲಿ ನಡೆದಿದೆ.
ವಿಧಾನ ಪರಿಷತ್ ಚುನಾವಣೆ ಮತದಾನ ಬಿರುಸಿನಿಂದ ಸಾಗಿದ್ದು, ಮತದಾರರು ಮತಗಟ್ಟೆಗಳಿಗೆ ಆಗಮಿಸಿ ಹಕ್ಕು ಚಲಾಯಿಸುತ್ತಿದ್ದಾರೆ. ಅನಾರೋಗ್ಯದಿಂದ ನರಳುತ್ತಿದ್ದ ಗ್ರಾಮ ಪಂಚಾಯಿತಿ ಸದಸ್ಯ ಅನ್ಸರ್ ಅಹ್ಮದ್ ಆಕ್ಸಿಜನ್ ಕಿಟ್ ಧರಿಸಿ ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿ ಮಾದರಿಯಾಗಿದ್ದಾರೆ.
ಹುಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾರ್ಡ್ ನಂ.4ರಿಂದ ಆಯ್ಕೆಯಾದ ಗ್ರಾಮ ಪಂಚಾಯಿತಿ ಸದಸ್ಯ ಅನ್ಸರ್ ಅಹ್ಮದ್ 3 ತಿಂಗಳ ಹಿಂದೆ ಕೋವಿಡ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆದಿದ್ದರು. ಕೋವಿಡ್ನಿಂದ ಗುಣಮುಖರಾದರೂ ಅನಾರೋಗ್ಯ ಇವರನ್ನು ಕಾಡುತ್ತಿತ್ತು.