ಮೈಸೂರು:ಮೈಸೂರು ಮಹಾರಾಜರ ಕಾಲದಕೆರೆಯೊಂದು ಸರಿಯಾದ ನಿರ್ವಹಣೆಯಿಲ್ಲದೇ ಮಲಿನಗೊಳ್ಳುತ್ತಿದ್ದು, ಪ್ರತಿವರ್ಷ ವಲಸೆ ಬರುತ್ತಿದ್ದ ವಿದೇಶಿ ಪಕ್ಷಿಗಳು ಕೂಡ ದೂರ ಉಳಿದು ಬಿಟ್ಟಿವೆ.
ನಂಜನಗೂಡು ತಾಲೂಕಿನ ಹದಿನಾರು ಗ್ರಾಮದ ಸರ್ವೇ ನಂ.57ರಲ್ಲಿ 198 ಎಕರೆ 3 ಗುಂಟೆ ವಿಸ್ತೀರ್ಣ ಹೊಂದಿರುವ ಬೃಹತ್ ಕೆರೆ ಇದೆ. ಇದನ್ನು ಮೈಸೂರು ಮಹಾರಾಜರು ಉಳಿಸಿದ್ದರು. ಬಳಿಕ ಡಾ. ಎಚ್.ಸಿ. ಮಹದೇವಪ್ಪ ಅವರು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ, ತಾವು ಹುಟ್ಟಿ ಬೆಳೆದ ಊರಿಗೆ ಏನಾದರೂ ಕೊಡುಗೆ ನೀಡಬೇಕೆಂಬ ಹಂಬಲದಿಂದ, ಹದಿನಾರು ಕೆರೆಯನ್ನು ಅಭಿವೃದ್ಧಿಗೊಳಿಸಲು ಅನುದಾನ ಕೊಡಿಸಿದ್ದರು. ಆ ಸಂದರ್ಭದಲ್ಲಿ ಕೆರೆ ಅಭಿವೃದ್ಧಿಗಾಗಿ ಗೇಟ್ಗಳನ್ನು ಹಾಗೂ ವಿದ್ಯುತ್ ದೀಪಗಳನ್ನು ಅಳವಡಿಸಿ ಕೆರೆ ಸಂರಕ್ಷಣೆ ಹಾಗೂ ಪ್ರವಾಸೋದ್ಯಮಕ್ಕೆ ಒತ್ತು ಕೊಡಲಾಯಿತು.