ಕರ್ನಾಟಕ

karnataka

ETV Bharat / state

ಸದನದಲ್ಲಿ ಬಹುಮತ ಸಾಬೀತು ಪಡಿಸುತ್ತೇವೆ.. ಸಂಸದ ಪ್ರತಾಪ್ ಸಿಂಹ ವಿಶ್ವಾಸ - undefined

ಈಗಾಗಲೇ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಸ್ತುತ ಬಿಜೆಪಿ ಬಹುಮತ ಸಾಬೀತುಪಡಿಸಬೇಕಿದ್ದು, ಖಂಡಿತವಾಗಿಯೂ ಬಹುಮತ ಸಾಬೀತು ಪಡಿಸುತ್ತೇವೆ ಎಂದು ಸಂಸದ ಪ್ರತಾಪ್ ಸಿಂಹ ನುಡಿದಿದ್ದಾರೆ.

ಮೆಮು ರೈಲು ಉದ್ಘಾಟಿಸಿ ಮಾತನಾಡಿದ ಸಂಸದರು

By

Published : Jul 27, 2019, 2:11 PM IST

ಮೈಸೂರು:ಪ್ರಜಾಪ್ರಭುತ್ವ ಎಂಬುದು ನಂಬರ್ ಗೇಮ್. ಈ ನಂಬರ್ ಗೇಮ್‌ನಲ್ಲಿ ನಾವು ಮುಂದೆ ಇದ್ದೇವೆ. ವಿಶ್ವಾಸಮತ ಗೆದ್ದೇ ಗೆಲ್ಲುತ್ತೇವೆ ಎಂದು ಸಂಸದ ಪ್ರತಾಪ್ ಸಿಂಹ ಮೈಸೂರಿನಲ್ಲಿ ಹೇಳಿದರು.

ಮೆಮು ರೈಲು ಉದ್ಘಾಟಿಸಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ..

ಇಂದು ಮೈಸೂರು ಹಾಗೂ ಬೆಂಗಳೂರು ನಡುವೆ ಅತೀ ಕಡಿಮೆ ದರದಲ್ಲಿ ಜನ ಸಾಮಾನ್ಯರಿಗೆ ಅನುಕೂಲವಾಗಿರುವ ಮೆಮು ರೈಲು ಉದ್ಘಾಟನೆ ಮಾಡಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಸಮ್ಮಿಶ್ರ ಸರ್ಕಾರದ ದುರಾಡಳಿತದಿಂದ ಸರ್ಕಾರ ಬಿದ್ದು ಹೋಗಿದೆ. ಇಂತಹ ಸಂದರ್ಭದಲ್ಲಿ ಅತಿ ದೊಡ್ಡ ಪಕ್ಷವಾದ ಬಿಜೆಪಿ, ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ರಚನೆ ಮಾಡಿದ್ದು ಬಹುಮತ ಸಾಬೀತು ಪಡಿಸುತ್ತೇವೆ. ಹೇಗೆ ಎಂದರೆ ಪ್ರಜಾಪ್ರಭುತ್ವ ಎಂಬುದು ನಂಬರ್ ಗೇಮ್. ಈ ನಂಬರ್ ಗೇಮ್‌ನಲ್ಲಿ ನಾವು ಎರಡು ಪಕ್ಷಗಳಿಗಿಂತಲೂ ಹೆಚ್ಚಿನ ಸ್ಥಾನ ಗಳಿಸಿದ್ದೇವೆ ಎಂದರು.

ಉಳಿದಿರುವ ಮೂರು ಮುಕ್ಕಾಲು ವರ್ಷ ಯಡಿಯೂರಪ್ಪ ನೇತೃತ್ವದ ಸರ್ಕಾರ ಉತ್ತಮ ಆಡಳಿತ ನೀಡಲಿದ್ದು, ನಾನು ಸಂಸದನಾಗಿ ಉತ್ತಮ ಕೆಲಸ ಮಾಡಲು ಹಿಂದಿನ ಉಸ್ತುವಾರಿ ಸಚಿವ ಜಿ ಟಿ ದೇವೇಗೌಡರ ಸಹಾಯ ಮಾಡಿದ್ದನ್ನೂ ಪ್ರತಾಪ್​ ಸಿಂಹ ಸ್ಮರಿಸಿದರು.

For All Latest Updates

TAGGED:

ABOUT THE AUTHOR

...view details