ಮೈಸೂರು: ಹಬ್ಬದ ದಿನದಂದು ದೇವಸ್ಥಾನದ ವಿಚಾರವಾಗಿ ಎರಡು ಕೋಮುಗಳ ನಡುವೆ ಗಲಾಟೆ ನಡೆದು, ಸಮುದಾಯದ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಕಾರಣಕ್ಕೆ, ಗ್ರಾಮದ ಮಹಿಳೆಯರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಎಚ್.ಡಿ ಕೋಟೆ ತಾಲೂಕಿನ ಬೋಪ್ಪನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಎರಡು ಗುಂಪುಗಳ ನಡುವೆ ಗಲಾಟೆ : ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಮುಂದಾದ ಮಹಿಳೆಯರು - Suicide attempt
ಎರಡು ಕೋಮುಗಳ ನಡುವೆ ಗಲಾಟೆ ನಡೆದು, ಸಮುದಾಯದ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಕಾರಣಕ್ಕೆ, ಗ್ರಾಮದ ಮಹಿಳೆಯರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಎಚ್.ಡಿ ಕೋಟೆ ತಾಲೂಕಿನ ಬೊಪ್ಪನಹಳ್ಳಿ ಗ್ರಾಮದಲ್ಲಿ ಕಳೆದ ಎರಡು ದಿನಗಳ ಹಿಂದೆ ಮಾರಮ್ಮನ ದೇವಸ್ಥಾನದ ಹಬ್ಬದ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿದ್ದು, ಪೊಲೀಸರು ಒಂದು ಕೋಮಿನ 20 ಜನರ ಮೇಲೆ ಸ್ಟೇಷನ್ ನಲ್ಲಿ ಅಟ್ರಾಸಿಟಿ ಕೇಸ್ ದಾಖಲಿಸಿ, ಗಲಾಟೆ ನಡೆದ ಸಂದರ್ಭದಲ್ಲಿ ಹಲ್ಲೆ ನಡೆಸಿದ ವ್ಯಕ್ತಿಗಳನ್ನು ಬಂಧಿಸಲು ಮುದಾದಾಗ ಆರೋಪಿಗಳು ಪರಾರಿಯಾಗಿದ್ದಾರೆ. ಪೊಲೀಸರು ಸಮುದಾಯದ ಮುಖಂಡರನ್ನು ವಶಕ್ಕೆ ಪಡೆಯಲು ಹೋದಾಗ ಗ್ರಾಮಸ್ಥರ ನಡುವೆ ಮಾತಿಗೆ ಮಾತು ಬೆಳೆದು, ಊರಿನ ಮಹಿಳೆಯರು ಪೊಲೀಸರು ಸಂಭಂದವಿಲ್ಲದವರನ್ನು ಬಂಧಿಸುತ್ತಾರೆ ಎಂದು ಸ್ಥಳದಲ್ಲೇ ಪ್ರತಿಭಟನೆ ಮಾಡಿ, ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಲು ಯತ್ನಿಸಿದ್ದಾರೆ.
ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ 7 ಮಹಿಳೆಯರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಣ್ಣಪುಟ್ಟ ಸುಟ್ಟ ಗಾಯಗಳಾಗಿವೆ. ಗ್ರಾಮದಲ್ಲಿ ಈ ಪರಿಸ್ಥಿತಿ ಗಂಭೀರವಾಗಿರುವುದರಿಂದ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಪೋಲಿಸರು ಆಗಮಿಸಿದ್ದಾರೆ. ಈ ಸಂಬಂಧ ಎಚ್.ಡಿ.ಕೋಟೆ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.