ಕೆಪಿಸಿಸಿ ಮಾಧ್ಯಮ ವಕ್ತಾರ ಎಂ.ಲಕ್ಷ್ಮಣ್ ಮೈಸೂರಿನಲ್ಲಿ ಮಾತನಾಡಿದರು. ಮೈಸೂರು:ಬೆಂಗಳೂರು- ಮೈಸೂರು ನಡುವಿನ ಹೆದ್ದಾರಿಯನ್ನು ಸಿದ್ದರಾಮಯ್ಯ ಹಾಗೂ ಮಹದೇವಪ್ಪ ವೀಕ್ಷಣೆ ಮಾಡಲಿದ್ದಾರೆ. ಅದೇ ಸಮಯದಲ್ಲಿ ಮಾಧ್ಯಮಗಳಿಗೆ ಈ ಹೆದ್ದಾರಿ ಕಾಮಗಾರಿ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಎಂ.ಲಕ್ಷ್ಮಣ್ ಹೇಳಿದರು.
ಮೈಸೂರಿನಲ್ಲಿ ಇಂದು ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಇದೇ ತಿಂಗಳ 12ರಂದು ಬೆಂಗಳೂರು-ಮೈಸೂರು ಹೆದ್ದಾರೆ ಕಾಮಗಾರಿಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದಾರೆ. ಇದಕ್ಕೂ ಮುನ್ನ ನಾಳೆ ಸಿದ್ದರಾಮಯ್ಯ, ಈ ಹೈವೇ ಕಾಮಗಾರಿಯನ್ನು ಪರಿಶೀಲನೆ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.
9,360 ಕೋಟಿ ರೂ. ಹಣ ಖರ್ಚು:ಈ ಹೈವೇ ಕಾಮಗಾರಿಗೆ ಹಿಂದಿನ ಕಾಂಗ್ರೆಸ್ ಸರ್ಕಾರ ನಯಾ ಪೈಸೆ ನೀಡಿಲ್ಲ. ಈ ಕಾಮಗಾರಿಗೆ ಕೇಂದ್ರ ಸರ್ಕಾರ 9,360 ಕೋಟಿ ಹಣ ಖರ್ಚು ಮಾಡಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಈ ಬಗ್ಗೆ ನಾಳೆ ಸಿದ್ದರಾಮಯ್ಯ, ಮಾಜಿ ಸಚಿವ ಮಹಾದೇವಪ್ಪ ಅವರೊಂದಿಗೆ, ಕಾಮಗಾರಿ ವೀಕ್ಷಣೆ ಮಾಡಿ, ಈ ಕಾಮಗಾರಿಗೆ ಕಾಂಗ್ರೆಸ್ ಕೊಡುಗೆ ಏನು? ಈ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ದಾಖಲೆಗಳನ್ನು ಬಿಡುಗಡೆಗೂ ಮುನ್ನ, ಪರಿಶೀಲನೆ ನಡೆಸಲಾಗುವುದು ಎಂದು ಅವರು ತಿಳಿಸಿದರು.
ಇದನ್ನೂ ಓದಿ:ಭ್ರಷ್ಟ ಬಿಜೆಪಿ ಸರ್ಕಾರದಿಂದ ರಾಜ್ಯದ ಹಾಲು ಉತ್ಪಾದಕರು ಹಾಗೂ ಗ್ರಾಹಕರಿಗೆ ಕುತ್ತು: ಸಿದ್ದರಾಮಯ್ಯ
ಶಾಸಕ ಮಾಡ್ನಾಳ್ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ:ಹಿಂದೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಬಂಗಾರು ಲಕ್ಷ್ಮಣ್ ಒಂದು ಲಕ್ಷ ಹಣ ಪಡೆಯುವಾಗ, ಅವರು ದಲಿತ ಎಂಬ ಕಾರಣಕ್ಕಾಗಿ, ಅವರ ವಿರುದ್ಧ ಬಿಜೆಪಿಯವರೇ ಶಿಸ್ತು ಕ್ರಮ ಕೈಗೊಂಡರು. ಆದರೆ, ಪುತ್ರ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು. ಪ್ರಕರಣದಲ್ಲಿ ಶಾಸಕ ಮಾಡ್ನಾಳ್ ವಿರೂಪಾಕ್ಷಪ್ಪ ಮೊದಲ ಆರೋಪಿ ಆಗಿದ್ದರು. ಅವರ ವಿರುದ್ಧ ಕ್ರಮ ಏಕೆ ಕೈಗೊಳ್ಳುತ್ತಿಲ್ಲ. ಈ ವಿಚಾರವಾಗಿ ಬಿಜೆಪಿಯವರು ಒಬ್ಬೊಬ್ಬರು ಒಂದೊಂದು ರೀತಿ, ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹ ಮನಬಂದಂತೆ ಮಾತಾನಾಡುತ್ತಿರುವುದು ಸರಿಯಲ್ಲ ಎಂದು ಲಕ್ಷ್ಮಣ್ ಆಕ್ಷೇಪ ವ್ಯಕ್ತಪಡಿಸಿದರು.
ಇದನ್ನೂ ಓದಿ:ದಾರಿ ತಪ್ಪಿಸುವ, ಯಾಮಾರಿಸುವ ಯೋಜನೆಗೆ ಕಿವಿಗೊಡಬೇಡಿ : ಕಾಂಗ್ರೆಸ್ ಉಚಿತ ಯೋಜನೆಗಳಿಗೆ ಸಿಎಂ ತಿರುಗೇಟು
ಸಿದ್ದರಾಮಯ್ಯ ವಿರುದ್ಧ ಆರೋಪ ಮಾಡೋದು ಸರಿಯಲ್ಲ:ಪ್ರತಿಪಕ್ಷ ನಾಯಕಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಕಾಫಿ, ಟೀ, ಬಿಸ್ಕೆಟ್ಗೆ 200 ಕೋಟಿ ರೂಪಾಯಿ ಹಣ ಖರ್ಚು ಮಾಡಲಾಗಿದೆ ಎಂಬ ಬಿಜೆಪಿಯ ವಕ್ತಾರ ಎನ್.ಆರ್. ರಮೇಶ್ ಅವರ ಆರೋಪಕ್ಕೆ ಈಗಾಗಲೇ ಸಿದ್ದರಾಮಯ್ಯನವರೇ ಸೂಕ್ತ ಸ್ಪಷ್ಟನೆ ನೀಡಿದ್ದಾರೆ. ಯಾವುದೇ ದಾಖಲಾತಿಗಳಿಲ್ಲದೆ, ಇಲ್ಲಸಲ್ಲದ ಆರೋಪ ಮಾಡಬಾರದು. ಲೋಕಾಯುಕ್ತಕ್ಕೆ ದೂರು ನೀಡುತ್ತಿರುವ ಎನ್.ಆರ್. ರಮೇಶ್ ಅವರೇ ಭ್ರಷ್ಟರು. ಅವರು ಆರೋಪ ಮಾಡುವ ಕೆಲಸದಲ್ಲಿ ತೊಡಗಿದ್ದಾರೆ ಎಂ ಲಕ್ಷ್ಮಣ್ ಪ್ರತ್ಯಾರೋಪ ಮಾಡಿದರು.
ಇದನ್ನೂ ಓದಿ:ಬೊಮ್ಮಾಯಿ ಕೂರಿಸಿಕೊಂಡು ಭ್ರಷ್ಟಾಚಾರ ರಹಿತ ಸರ್ಕಾರ ನೀಡುವ ಶಾ ಭರವಸೆ ಪ್ರಶ್ನಿಸಿ ಆಯೋಗಕ್ಕೆ ದೂರು: ಪ್ರಿಯಾಂಕ್ ಖರ್ಗೆ