ಮೈಸೂರು:ಮೈಸೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ಪ್ರಾಧ್ಯಾಪಕರೊಬ್ಬರ ವಿರುದ್ಧ ಸಂಶೋಧನಾ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ ಆರೋಪ ಕೇಳಿ ಬಂದಿದೆ. ಈ ಕುರಿತು ಆರೋಪಿ ಪತ್ನಿ ಪ್ರೊ.ಲೋಲಾಕ್ಷಿ ಪ್ರತಿಕ್ರಿಯಿಸಿದ್ದಾರೆ. ಸಂಶೋಧನಾ ವಿದ್ಯಾರ್ಥಿನಿಗೆ ಸಂಸಾರ ಇರುವುದರಿಂದ, ಆಕೆಯ ರಕ್ಷಣೆಯಾಗಬೇಕು ಎಂಬುದು ನನ್ನ ಉದ್ದೇಶ. ಆದರೆ, ಪತಿ ವಿರುದ್ಧ ನನ್ನ ಹೋರಾಟ ಮುಂದುವರೆಯಲಿದೆ ಎಂದು ವಿಶ್ವವಿದ್ಯಾನಿಲಯದಲ್ಲಿ ಪ್ರಾಧ್ಯಾಪಕಿಯಾಗಿರುವ ಪ್ರೊ. ಲೋಲಾಕ್ಷಿ ಹೇಳಿದ್ದಾರೆ.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪತಿ (ಪ್ರೊ.ರಾಮಚಂದ್ರ ) ವಿರುದ್ಧದ ಆರೋಪಗಳಿಗೆ ನನ್ನ ಬಳಿ ಕೆಲವು ಆಧಾರಗಳಿವೆ. ಇದರ ಬಗ್ಗೆ ಕುಟುಂಬಸ್ಥರು ಕುಳಿತು ಚರ್ಚೆ ಮಾಡಿ, ನಿರ್ಧಾರ ತೆಗೆದುಕೊಳ್ಳುತ್ತೇವೆ. ಕುಟುಂಬದ ವ್ಯಾಜ್ಯದಲ್ಲಿ ವಿದ್ಯಾರ್ಥಿನಿಯನ್ನು ಮಧ್ಯ ತಂದಿಲ್ಲ. ಆಧಾರಗಳನ್ನಿಟ್ಟುಕೊಂಡು ಹೋರಾಟ ಮಾಡುತ್ತೇನೆ ಎಂದಿದ್ದಾರೆ.
ಲೋಲಾಕ್ಷಿ ಪರ ವಕೀಲ ದಿನೇಶ್ ಮಾತನಾಡಿ, ವಿಚಾರಣೆಗೆ ಕರೆದಿದ್ದಾರೆ. ಪೊಲೀಸರು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ಆರೋಪಿ ಪತ್ನಿ ಹೇಳಿದ್ದೇನು..?