ಮೈಸೂರು:ಯುವತಿಯೊಂದಿಗೆ ಅಶ್ಲೀಲವಾಗಿ ಕಾಣಿಸಿಕೊಂಡಿದ್ದ ಶಿಕ್ಷಕನನ್ನು ಅಮಾನತು ಮಾಡಿ ಎಂದು ಶಿಕ್ಷಣ ಇಲಾಖೆ ಉಪನಿರ್ದೇಶಕರು ಆದೇಶ ಮಾಡಿದ್ದಾರೆ.
ಗ್ರಾಮದ ಯುವತಿಯೊಂದಿಗೆ ಅಸಭ್ಯ ವರ್ತನೆ ಆರೋಪ... ಶಿಕ್ಷಕ ಅಮಾನತು - ಶಿಕ್ಷಣ ಇಲಾಖೆ ಉಪನಿರ್ದೇಶಕರು ಆದೇಶ
ನಂಜನಗೂಡು ತಾಲೂಕಿನ ರಾಂಪುರ ಶಾಲೆಯ ಶಿಕ್ಷಕ ಗ್ರಾಮದ ಯುವತಿಯೊಂದಿಗೆ ಅಶ್ಲೀಲವಾಗಿ ಕಾಣಿಸೊಕೊಂಡ ಹಿನ್ನೆಲೆ ಆತನನ್ನು ಅಮಾನತು ಮಾಡಿ ಶಿಕ್ಷಣ ಇಲಾಖೆ ಉಪನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
ಅಸಭ್ಯ ವರ್ತನೆ ತೋರಿದ ಶಿಕ್ಷಕ ಅಮಾನತು
ಜಿಲ್ಲೆಯ ನಂಜನಗೂಡು ತಾಲೂಕಿನ ರಾಂಪುರ ಶಾಲೆಯ ಶಿಕ್ಷಕ ಗ್ರಾಮದ ಯುವತಿಯೊಂದಿಗೆ ಅಶ್ಲೀಲವಾಗಿ ಕಾಣಿಸೊಕೊಂಡ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಶಿಕ್ಷಕನನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿ ಶಾಲೆಯ ಮುಂದೆ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ಸ್ಥಳಕ್ಕಾಗಮಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್. ರಾಜ ಉಪನಿರ್ದೇಕರಿಗೆ ವರದಿ ಸಲ್ಲಿಸಿದ್ದರು. ಈ ವರದಿ ಅನ್ವಯ ಶಿಕ್ಷಕ ಸಿದ್ದರಾಜು ಅವರನ್ನು ಅಮಾನತುವಗೊಳಿಸುವಂತೆ ಆದೇಶ ಹೊರಡಿಸಿದ್ದಾರೆ.