ಮೈಸೂರು : ಅತ್ಯಾಚಾರ ಸಂತ್ರಸ್ತೆ ನಾನು ಇನ್ನೂ ಎರಡು ದಿನ ಯಾರ ಜೊತೆಯೂ ಮಾತಾಡುವ ಸ್ಥಿತಿಯಲ್ಲಿ ಇಲ್ಲ ಎಂದು ಹೇಳಿದ್ದಾರೆ. ಹೀಗಾಗಿ, ಅವರನ್ನು ಮಾತನಾಡಿಸಲು ಹೋಗಿಲ್ಲ ಎಂದು ಮುಜರಾಯಿ, ವಕ್ಫ್ ಹಾಗೂ ಹಜ್ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.
ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಲಲಿತಾದ್ರಿಪುರಂ ನಿರ್ಜನ ಪ್ರದೇಶದಲ್ಲಿ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದರು. ನಂತರ ಮಾತನಾಡಿದ ಅವರು, ಬೇರೆ ಸರ್ಕಾರಗಳು ಇದ್ದಾಗಲೂ ಈ ರೀತಿ ಕೇಸ್ ಆಗಿವೆ. ನಮ್ಮ ಸರ್ಕಾರ ಈ ಕೇಸ್ ಅನ್ನು ಗಂಭೀರವಾಗಿ ಪರಿಗಣಿಸಿದೆ. ಶೀಘ್ರವೇ ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತದೆ ಎಂದರು.