ಕರ್ನಾಟಕ

karnataka

ETV Bharat / state

ಮೈಸೂರಿನಲ್ಲಿ ಭಾರಿ ಮಳೆಗೆ ಮನೆ ಗೋಡೆ ಕುಸಿದು ವ್ಯಕ್ತಿ ಸಾವು - The wall collapses and the person dies mysuru

ಮೈಸೂರಿನಲ್ಲಿ ಭಾರಿ ಮಳೆಗೆ ಮನೆ ಗೋಡೆ ಕುಸಿದು ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಬಳಿಯ ಅಬ್ಬೂರು ಗ್ರಾಮದಲ್ಲಿ ನಡೆದಿದೆ

ಮೈಸೂರಿನಲ್ಲಿ ಮನೆ ಗೋಡೆ ಕುಸಿದು ವ್ಯಕ್ತಿ ಸಾವು

By

Published : Aug 9, 2019, 12:47 PM IST

ಮೈಸೂರು:ಭಾರಿ ಮಳೆಗೆ ಮನೆ ಗೋಡೆ ಕುಸಿದು ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಬಳಿಯ ಅಬ್ಬೂರು ಗ್ರಾಮದಲ್ಲಿ ನಡೆದಿದೆ.

ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ಗಣೇಶ್ ಎಂದು ಗುರುತಿಸಲಾಗಿದೆ.

ಭಾರಿ ಮಳೆ ಮತ್ತು ಗಾಳಿಗೆ ಮನೆಯ ಗೋಡೆ ಕುಸಿದು ಈ ಅವಘಡ ಸಂಭವಿಸಿದೆ. ಮನೆಯಲ್ಲಿದ್ದ ಇನ್ನೂ ಮೂವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಹನಗೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನಾ ಸ್ಥಳಕ್ಕೆ ತಾಲೂಕು ಅಧಿಕಾರಿಗಳು ಧಾವಿಸಿದ್ದು ಪರಿಹಾರ ಕಾರ್ಯಕ್ಕೆ ಮುಂದಾಗಿದ್ದಾರೆ.

ABOUT THE AUTHOR

...view details