ಮೈಸೂರು: ನಗರದಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದ್ದು, ಮನೆಯ ಮುಂದೆ ನಿಲ್ಲಿಸಲಾಗಿದ್ದ ಎರಡು ಕಾರುಗಳ ನಾಲ್ಕೂ ಚಕ್ರಗಳನ್ನು ಕಳ್ಳರು ಕದ್ದೊಯ್ದಿರುವ ಘಟನೆ ಸರಸ್ವತಿಪುರಂ ಠಾಣಾ ವ್ಯಾಪ್ತಿಯ ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ.
ಮನೆ ಮುಂದೆ ನಿಲ್ಲಿಸಿದ ಕಾರುಗಳ ಚಕ್ರಗಳ ಕಳ್ಳತನ ಕಳೆದೆರಡು ದಿನಗಳಿಂದ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಂಜೆಯಿಂದ ಮುಂಜಾನೆಯ ತನಕವೂ ಎಡೆಬಿಡದೇ ಮಳೆ ಸುರಿಯುತ್ತಿರುವುದು ಕಳ್ಳರಿಗೆ ಅನುಕೂಲ ಮಾಡಿ ಕೊಟ್ಟಂತಾಗಿದೆ.
ಮನೆ ಮುಂದೆ ನಿಲ್ಲಿಸಿದ ಕಾರುಗಳ ಚಕ್ರಗಳ ಕಳ್ಳತನ ನಿನ್ನೆ ರಾತ್ರಿಯಿಂದ ಮಳೆ ಆರಂಭವಾಗಿದ್ದು, ರಾಜರಾಜೇಶ್ವರಿ ನಗರದಲ್ಲಿನ ಎರಡು ಮನೆಗಳ ಮುಂದೆ ನಿಲ್ಲಿಸಲಾಗಿದ್ದ ಕಾರಿನ ನಾಲ್ಕು ಚಕ್ರಗಳನ್ನ ಕಳ್ಳರು ಕದ್ದೊಯ್ದಿದ್ದಾರೆ. ಮಳೆ ಬೀಳುತ್ತಿದ್ದ ಸಮಯದಲ್ಲಿ ಮನೆಯವರೆಲ್ಲ ನಿದ್ರೆಗೆ ಜಾರಿದ ನಂತರ ಕಳ್ಳರು ತಮ್ಮ ಕೈ ಚಳಕ ತೋರಿಸಿದ್ದಾರೆ.
ಮನೆ ಮುಂದೆ ನಿಲ್ಲಿಸಿದ ಕಾರುಗಳ ಚಕ್ರಗಳ ಕಳ್ಳತನ ಒಂದು ಚಕ್ರ 6 ಸಾವಿರ ರೂ.ಬೆಲೆ ಬಾಳಲಿದ್ದು ಒಟ್ಟು 48 ಸಾವಿರ ರೂ.ಮೌಲ್ಯದ ಚಕ್ರಗಳನ್ನು ಕಳ್ಳರು ಕದ್ದೊಯ್ದಿದ್ದು, ಚಕ್ರವಿರುವ ಜಾಗದಲ್ಲಿ ಕಲ್ಲು ತಂದು ಇರಿಸಿದ್ದಾರೆ. ಬೆಳಗ್ಗೆ ಮನೆಯ ಮಾಲೀಕರು ನೋಡಿದಾಗ ಘಟನೆ ಬೆಳಕಿಗೆ ಬಂದಿದ್ದು, ಈ ಕುರಿತು ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆ ಮನೆಯ ಮುಂದೆ ನಿಲ್ಲಿಸಲಾಗಿದ್ದ ವಾಹನಗಳ ಪೆಟ್ರೋಲ್ ಕದ್ದು ಪರಾರಿಯಾಗುತ್ತಿದ್ದ ಕಳ್ಳರು, ಇದೀಗ ವಾಹನಗಳ ಚಕ್ರಗಳನ್ನೇ ಕದ್ದು ಪರಾರಿಯಾಗುತ್ತಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.