ಮೈಸೂರು:ರಾಜ್ಯದಲ್ಲಿ ಈಗ ಸಿಕ್ಕಾಪಟ್ಟೇ ಲೀಡರ್ಗಳಾಗಿದ್ದಾರೆ. ನಾನು ಯಾರಿಗೂ ಪ್ರತಿಸ್ಪರ್ಧಿ ಅಲ್ಲ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್. ಸಂತೋಷ್ ಮಾಧ್ಯಮದವರು ಪ್ರತಿಕ್ರಿಯೆಗೆ ಸಂಪರ್ಕಿಸಿದಾಗ ಮಾರ್ಮಿಕವಾಗಿ ಹೇಳಿ, ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.
ಮೈಸೂರಿನ ಚುನಾವಣಾ ಕಣ ರಂಗೇರುತ್ತಿದ್ದು, ಈ ಚುನಾವಣಾ ಕಣಕ್ಕೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್. ಸಂತೋಷ್ ಎಂಟ್ರಿ ಕೊಟ್ಟಿದ್ದಾರೆ. ಅವರು ಇಂದು ಮೈಸೂರಿನ ಖಾಸಗಿ ಹೋಟೆಲ್ನಲ್ಲಿ ಮೈಸೂರು ವಿಭಾಗದ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನವನ್ನು ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಮಾಧ್ಯಮದವರು ಪ್ರತಿಕ್ರಿಯೆಗೆ ಪ್ರಯತ್ನಿಸಿದಾಗ, ಈಗ ರಾಜ್ಯದಲ್ಲಿ ಸಿಕ್ಕಾಪಟ್ಟೆ ನಾಯಕರಿದ್ದಾರೆ. ನಾನು ಯಾರಿಗೂ ಪ್ರತಿಸ್ಪರ್ಧಿ ಆಗಲೂ ಬಯಸುವುದಿಲ್ಲ ಎಂದು, ತಮ್ಮ ಕುರಿತು ಎದ್ದಿರುವ ಸುದ್ದಿಗಳಿಗೆ ಸ್ಪಷ್ಟೀಕರಣ ಕೊಡಲು ನಿರಾಕರಿಸಿ, ಮಾರ್ಮಿಕವಾಗಿ ಒಂದು ಮಾತು ಹೇಳಿ ಸುಮ್ಮನಾದರು.