ಕರ್ನಾಟಕ

karnataka

ETV Bharat / state

ಸಣ್ಣಪುಟ್ಟ ವ್ಯತ್ಯಾಸಗಳಿವೆ, ಆದರೂ ಗೆಲುವು ನನ್ನದೇ : ಮೈತ್ರಿ ಅಭ್ಯರ್ಥಿ ಸಿ ಎಚ್​ ವಿಜಯ್ ಶಂಕರ್

ಎರಡು ಪಕ್ಷಗಳು ಒಟ್ಟಾಗಿ ಚುನಾವಣೆ ಎದುರಿಸಿದ್ದೇವೆ. ಎರಡು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುವ ನಿರೀಕ್ಷೆಯಲ್ಲಿದ್ದೆವು. ಆದರೆ, ಕೆಲ ಗ್ರಾಮದಲ್ಲಿ ಸಣ್ಣಪುಟ್ಟ ವ್ಯತ್ಯಾಸಗಳಿಂದ 1 ಲಕ್ಷ ಮತಗಳಿಂದ ಗೆಲುವು ಸಾಧಿಸುತ್ತೇನೆ. ಕೆಲವು ಗ್ರಾಮಗಳಲ್ಲಿ ಸಣ್ಣ ಪುಟ್ಟ ವ್ಯತ್ಯಾಸಗಳಾಗಿದ್ದು ಅದು ಚುನಾವಣಾ ಫಲಿತಾಂಶದ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ ಎಂದರು.

ಸಿ ಎಚ್​ ವಿಜಯ್ ಶಂಕರ್

By

Published : May 1, 2019, 11:53 PM IST

ಮೈಸೂರು:ಕೆಲವು ಗ್ರಾಮಗಳಲ್ಲಿ ಸಣ್ಣಪುಟ್ಟ ವ್ಯತ್ಯಾಸಗಳಿವೆ. ಆದರೂ ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸಿ ಎಚ್‌ ವಿಜಯ್ ಶಂಕರ್ ಹೇಳಿದ್ದಾರೆ.

ತಮ್ಮ‌ಮನೆಯಲ್ಲಿ ಈಟಿವಿ ಭಾರತದೊಂದಿಗೆ ಮಾತನಾಡಿದ ಮೈಸೂರು-ಕೊಡಗು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿ ಎಚ್ ವಿಜಯ್ ಶಂಕರ್, ಸಚಿವ ಜಿಟಿ ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ನಾನು ಒಂದು ಲಕ್ಷಕ್ಕೂ ಹೆಚ್ಚಿನ ಮತಗಳಿಂದ ಗೆಲುವು ಸಾಧಿಸುತ್ತೇನೆ. ಈ ಬಗ್ಗೆ ಯಾವುದೇ ಸಂಶಯವಿಲ್ಲ ಎಂದರು.

ಸಿ ಎಚ್​ ವಿಜಯ್ ಶಂಕರ್

ಎರಡು ಪಕ್ಷಗಳು ಒಟ್ಟಾಗಿ ಚುನಾವಣೆ ಎದುರಿಸಿದ್ದೇವೆ. ಎರಡು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುವ ನಿರೀಕ್ಷೆಯಲ್ಲಿದ್ದೆವು. ಆದರೆ, ಕೆಲವು ಗ್ರಾಮದಲ್ಲಿ ಸಣ್ಣ ಪುಟ್ಟ ವ್ಯತ್ಯಾಸಗಳಿಂದ 1 ಲಕ್ಷ ಮತಗಳಿಂದ ಗೆಲುವು ಸಾಧಿಸುತ್ತೇನೆ. ಕೆಲವು ಗ್ರಾಮಗಳಲ್ಲಿ ಸಣ್ಣಪುಟ್ಟ ವ್ಯತ್ಯಾಸಗಳಾಗಿದ್ದು ಅದು ಚುನಾವಣಾ ಫಲಿತಾಂಶದ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ ಎಂದರು.

ನನ್ನ ವಿರುದ್ಧ ಯಾವುದೇ ಒಳ ಸಂಚು ನಡೆದಿಲ್ಲ. ನನಗೆ ಸಂಚು ಒಳಸಂಚಿನ ಬಗ್ಗೆ ನಂಬಿಕೆ ಇಲ್ಲ. ಮತದಾರರ ಮೇಲೆ ಸಂಪೂರ್ಣ ನಂಬಿಕೆ ಇದೆ. ಜನ ಯಾವತ್ತೂ ಮೋಸ ಹೋಗುವುದಿಲ್ಲ, ಅದರಲ್ಲೂ ಮೈಸೂರು-ಕೊಡಗು ಕ್ಷೇತ್ರದ ಮತದಾರರನ್ನು ವಂಚಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

ABOUT THE AUTHOR

...view details